ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್​ಗೆ ಕಾಡ್ಗಿಚ್ಚು ಹಬ್ಬಿದ್ದು ಸೋಲಾ ಅರಣ್ಯ ಪ್ರದೇಶ ಬೆಂಕಿಗೆ ಆಹುತಿಯಾಗುತ್ತಿದೆ. ಕೆಲವು ದಿನಗಳಿಂದ ಬೆಂಕಿ ವ್ಯಾಪಿಸಿದ್ದು ಹತೋಟಿಗೆ ಬರುತ್ತಿಲ್ಲ. ಅರಣ್ಯ ಇಲಾಖೆ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.

ಈಗಾಗಲೇ ನೂರಾರು ಎಕರೆ ಅರಣ್ಯ ಪ್ರದೇಶ ಅಗ್ನಿಗೆ ಆಹುತಿಯಾಗಿದೆ. ಶಿರಾಡಿ ಘಾಟ್​ ಬಂದ್​ ಆಗಿದ್ದರಿಂದ ಚಾರ್ಮಾಡಿ ಘಾಟ್​ನಲ್ಲಿ ವಾಹನ, ಜನ ಸಂಚಾರ ಹೆಚ್ಚಾಗಿದ್ದು ಈಗ ಆವರಿಸಿರುವ ಹೊಗೆಯಿಂದಾಗಿ ಪರದಾಡುವಂತಾಗಿದೆ.

ಸೋಮನ ಕಾಡು, ಮಲಯಮಾರುತ ಅರಣ್ಯ ಪ್ರದೇಶಕ್ಕೂ ವ್ಯಾಪಿಸಿದ್ದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.