ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಲುವಾಗಿ ಕಾಂಗ್ರೆಸ್, ರಾಜಧಾನಿ ದೆಹಲಿಯಲ್ಲಿ ಮೂರು ದಿನಗಳ ಕಾಲ ಸಭೆ ನಡೆಸಲಿದೆ.
ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಕುರಿತು ಸ್ಕ್ರೀನಿಂಗ್ ಸಮಿತಿ ಸಭೆ ಮಾ.27, 28, 29 ರಂದು ನಡೆಯಲಿದ್ದು, ಸ್ಕ್ರೀನಿಂಗ್ ಸಮಿತಿಯ ನೇತೃತ್ವವನನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಧುಸೂದನ್ ಮಿಸ್ತ್ರಿ ಅವರು ವಹಿಸಿದ್ದಾರೆ.
ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ವಿಚಾರಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿಯವರೊಂದಿಗೆ ಮಾತುಕತೆ ನಡೆಸಿದ್ದರು. ರಾಹುಲ್ ಗಾಂಧಿ ಭೇಟಿಯಾದ ಬಳಿಕ ರಾಜ್ಯಕ್ಕೆ ಆಗಮಿಸಿದ ಸಿದ್ದರಾಮಯ್ಯ ಅವರು, ಜಿ. ಪರಮೇಶ್ವರ್, ಕೆ.ಸಿ. ವೇಣುಗೋಪಾಲ್ ಸೇರಿದಂತೆ ಇನ್ನಿತರೆ ನಾಯಕರೊಂದಿಗೆ ಸಭೆ ನಡೆಸಿದ್ದರು. ಈ ಸಭೆ ಬಳಿಕ ದೆಹಲಿಯಲ್ಲಿ ದೆಹಲಿಯಲ್ಲಿ ಮೂರು ದಿನಗಳ ಸಭೆ ನಡೆಸಲು ನಿರ್ಧಾರ ಕೈಗೊಂಡಿದ್ದಾರೆಂದು ತಿಳಿದುಬಂದಿದೆ.

RELATED ARTICLES  ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆ; ನನ್ನ ರಾಜಕೀಯ ಗುರುಗಳ ಮಗನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಿರುವುದು ನನ್ನ ಭಾಗ್ಯ: ಡಿಕೆಶಿ