ಬೆಂಗಳೂರು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಇದೇ 8ರಂದು ಎಲ್ಲ ಇಂದಿರಾ ಕ್ಯಾಂಟೀನ್‌ಗಳಲ್ಲಿ ಎಲ್ಲ ಮಹಿಳೆಯರಿಗೆ ತಿಂಡಿ ಮತ್ತು ಊಟ ಉಚಿತ ವಿತರಿಸಲಾಗುವುದು ಎಂದು ಮೇಯರ್‌ ಆರ್‌.ಸಂಪತ್‌ ರಾಜ್‌ ತಿಳಿಸಿದರು.

RELATED ARTICLES  ಕಸಬ್ ಸಾವಿನ ವರ್ಷಾಚರಣೆ ಮಾಡಿದವರನ್ನು ಗುಂಡಿಕ್ಕಿ ಕೊಲ್ಲಿ ಎಂದ ರಾಜ್ಯಪಾಲರು

ಪಾಲಿಕೆಯಲ್ಲಿ ಮಂಗಳವಾರ ನಡೆದ ಬಜೆಟ್‌ ಮೇಲಿನ ಚರ್ಚೆಯಲ್ಲಿ ಈ ವಿಷಯ ತಿಳಿಸಿದರು.

ಪಾಲಿಕೆ ಸದಸ್ಯೆಯರಿಗೆ ಮತ್ತು ಮಾಧ್ಯಮದ ಮಹಿಳೆಯರಿಗೆ ಉಚಿತವಾಗಿ ಆಹಾರ ನೀಡಲು ತೀರ್ಮಾನಿಸಿರುವುದಾಗಿ ಮೇಯರ್‌ ಪ್ರಕಟಿಸಿದರು. ಇದಕ್ಕೆ ಕೆಲವು ಸದಸ್ಯರು ಆಕ್ಷೇಪ ವ್ಯಕ್ತಪಡಿಸಿ, ಎಲ್ಲ ಮಹಿಳೆಯರಿಗೂ ನೀಡಬೇಕೆಂದು ಒತ್ತಾಯಿಸಿದರು. ಇದಕ್ಕೆ ಮೇಯರ್‌ ಸ್ಪಂದಿಸಿದರು.

RELATED ARTICLES  ನಿಮ್ಮ ಜನ್ಮರಾಶಿಗೆ ಅನುಗುಣವಾಗಿ (ದಿನಾಂಕ 26-01-2019) ಇಂದಿನ ದಿನ ಫಲಾನುಫಲಗಳು ಹೇಗಿರಲಿದೆ ಗೊತ್ತೆ?