ಹಾಸನ. : ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೇರಿದಂತೆ 12 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಕರ್ನಾಟಕ ಸರ್ಕಾರವು ಬುಧವಾರ ತಡ ರಾತ್ರಿ ಆದೇಶ ಹೊರಡಿಸಿದೆ.

ಐಎಎಸ್ ಅಧಿಕಾರಿಗಳ ವರ್ಗಾವಣೆಗೆ ಚುನಾವಣಾ ಆಯೋಗ ಅನುಮತಿ ನೀಡುವುದನ್ನೇ ಕಾಯುತ್ತಿದ್ದ ರಾಜ್ಯ ಸರ್ಕಾರ, ಅಧಿಕೃತ ಆದೇಶ ಹೊರಡಿಸಲಿದೆ.
ಈ ಹಿಂದೆ ಮಹಾ ಮಸ್ತಕಾಭಿಷೇಕಕ್ಕೂ ಮುನ್ನ ರೋಹಿಣಿ ಸಿಂಧೂರಿ ಸೇರಿದಂತೆ ಅಧಿಕಾರಗಳ ವರ್ಗಾವಣೆಗೆ ಚುನಾವಣಾ ಆಯೋಗ ತಡೆಯಾಜ್ಞೆ ನೀಡಿತ್ತು.

RELATED ARTICLES  ರಾಜ್ಯಸಭೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ.

ಚುನಾವಣಾ ಆಯೋಗದ ಸೂಚನೆ ಮೇರೆಗೆ ತಡೆ ಹಿಡಿಯಲಾಗಿದ್ದ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೇರಿದಂತೆ 10 ಜಿಲ್ಲಾಧಿಕಾರಿಗಳ ವರ್ಗಾವಣೆ ಮಾಡಿ ಮಾರ್ಚ್ 03ರಂದು ಬಂದಿದ್ದ ಆದೇಶವೂ ರದ್ದಾಗಿತ್ತು. ಆದರೆ, ಈಗ ಮಾರ್ಚ್ 07ರಂದು ಅಧಿಕೃತ ಆದೇಶ ಹೊರಡಿಸಲಾಗಿದೆ.

RELATED ARTICLES  ಅನ್ಯಧರ್ಮಕ್ಕೆ ಮತಾಂತರಗೊಳಿಸಲು ಯತ್ನ : ಮೂವರು ಮಹಿಳೆಯರು ಪೊಲೀಸರ ವಶ.

5 ಅಧಿಕಾರಿಗಳ ವರ್ಗಾವಣೆ ಆದೇಶ ರದ್ದು
ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ದಾಸರಿ ಅವರನ್ನು ಬೆಂಗಳೂರಿನ ಉದ್ಯೋಗಿಗಳ ತರಬೇತಿ ಇಲಾಖೆಗೆ ವರ್ಗಾಯಿಸಲಾಗಿದೆ. ಮೈಸೂರು ಜಿಲ್ಲಾಧಿಕಾರಿಯಾಗಿದ್ದ ರಣದೀಪ್ ಅವರನ್ನು ಹಾಸನ ಜಿಲ್ಲಾಧಿಕಾರಿಯಾಗಿ ವರ್ಗಾಯಿಸಲಾಗಿದೆ.