ಬೆಂಗಳೂರು: ರಾಜ್ಯದಲ್ಲಿ ಕಮಲವನ್ನು ಅರಳಿಸಲು ಬಿಜೆಪಿ ಮಾಸ್ಟರ್ ಪ್ಲಾನ್ ಮಾಡುತ್ತಿದ್ದು ಅದಕ್ಕಾಗಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹಾಗೂ ಅವರ 40 ಜನರ ತಂಡ ರವಿವಾರ ಕರ್ನಾಟಕಕ್ಕೆ ಆಗಮಿಸಲಿದೆ.

ಇಂದಿನಿಂದ ಮೂರು ದಿನಗಳ ಕಾಲ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ನಡೆದಿರುವ ಚುನಾವಣಾ ತಯಾರಿ ಪರಿಶೀಲನೆಯನ್ನು ಮಾಡಲಾಗುತ್ತದೆ, ಕೇಂದ್ರ ತಂಡದ ಜೊತೆಗೆ ಸಂಘ ಪರಿವಾರದ ಮುಖಂಡರಿಂದಲೂ ಕೂಡ ಮೌಲ್ಯಮಾಪನವನ್ನು ಮಾಡಲಾಗುತ್ತದೆ ಎಂದು ತಿಳಿದುಬಂದಿದೆ.

RELATED ARTICLES  ನಿಮ್ಮ ಜನ್ಮರಾಶಿಗೆ ಅನುಗುಣವಾಗಿ (ದಿನಾಂಕ 04-12-2018) ಇಂದಿನ ದಿನ ಫಲಾನುಫಲಗಳು ಹೇಗಿರಲಿದೆ ಗೊತ್ತೆ? .

ಕಳೆದ ಡಿಸೆಂಬರ್ 31ರಂದು ಬೆಂಗಳೂರಿಗೆ ಆಗಮಿಸಿದ್ದ ಅಮಿತ್ ಶಾ ರಾಜ್ಯ ನಾಯಕರಿಗೆ 19 ಅಂಶಗಳ ಟಾಸ್ಕನ್ನು ನೀಡಿದ್ದು, ಪ್ರತಿ ತಿಂಗಳು ನಡೆಸಿದ ಸಾಧನೆಯ ಬಗ್ಗೆ ವರದಿಯನ್ನು ರಾಷ್ಟ್ರಾಧ್ಯಕ್ಷ ಅಮಿತ್ ಶಾ ಕೇಳಿದ್ದರು. 19 ಅಂಶಗಳನ್ನು ಅನುಷ್ಠಾನಕ್ಕೆ ತಂದವರಿಗೆ ಟಿಕೆಟ್ ನೀಡುವ ಬಗ್ಗೆ ಚಿಂತನೆ ನಡೆಸಲಾಗುತ್ತದೆ ಎಂದು ತಿಳಿದುಬಂದಿದೆ.

RELATED ARTICLES  ಮನೆ ಮೇಲ್ಚಾವಣಿ ಕುಸಿದು ತೀವ್ರ ಹಾನಿ; ಸ್ಥಳಕ್ಕ ೆ ಗಜಾನನ ಪೈ ಭೇಟಿ

ಒಟ್ಟಾರೆಯಾಗಿ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ತರುವುದು ಶಾ ನಿಲುವು.