ಬೆಳಗಾವಿ: ಮುಂಬಯಿ ಕರ್ನಾಟಕ ಪ್ರದೇಶದಲ್ಲಿ ತಮ್ಮ ಪಕ್ಷ ಬಲಗೊಳ್ಳುತ್ತಿದ್ದು, ಜೆಡಿಎಸ್ ತನ್ನ ಸ್ವಂತ ಶಕ್ತಿಯ ಬಲದಿಂದ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಹೇಳಿದ್ದಾರೆ.

ಜೆಡಿಎಸ್‌ ಮತ್ತು ಬಿಎಸ್‌ಪಿ ಜಂಟಿಯಾಗಿ ನಗರದಲ್ಲಿ ಆಯೋಜಿಸಿದ್ದ ಹಿಂದುಳಿದ ವರ್ಗಗಳ ಸಮಾವೇಶ ಉದ್ಘಾಟಿಸಿ ಮಾತನಾಡಿದರು. ಒಂದು ವೇಳೆ ಉತ್ತರ ಕರ್ನಾಟಕ ಜನ ಅಧಿಕಾರಕ್ಕೆ ಬರಲು ತಮಗೆ ಬೆಂಬಲ ನೀಡಿದರೇ ಈ ಭಾಗದ ಜನರಿಗೆ ಉತ್ತಮ ಜೀವನ ಕಲ್ಪಿಸಿಕೊಡುವುದಾಗಿ ಭರವಸೆ ನೀಡಿದ್ದಾರೆ.

RELATED ARTICLES  ತಮ್ಮ ವಾಹನಕ್ಕೆ ತಾವೇ ದಂಡ ವಿಧಿಸಿದ ಪೋಲೀಸರು.

ಉತ್ತರ ಕರ್ನಾಟಕ ಭಾಗದಲ್ಲಿ ಪಕ್ಷಕ್ಕೆ ಈ ಹಿಂದೆ ತೀರಾ ಹಿನ್ನಡೆಯಾಗಿತ್ತು, ಆದರೆ ಈಗ ಕೆಲವು ಕ್ಷೇತ್ರಗಳಲ್ಲಿ ಜಯ ಸಾಧಿಸುವ ಆತ್ನವಿಶ್ವಾಸದಲ್ಲಿದೆ, ಗದಗದಲ್ಲಿ 1 ಧಾರವಾಡದಲ್ಲಿ 3, ವಿಜಯಾಪುರದಲ್ಲಿ 5 ಕ್ಷೇತ್ರಗಳಿಗೆ ಟಿಕೆಟ್ ಪ್ರಕಟಿಸಲಾಗಿದ್ದು, ಉಳಿದ ಕ್ಷೇತ್ರಗಳಿಗೆ ಶೀಘ್ರವೇ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗುವುದು ಎಂದು ಹೇಳಿದ್ದಾರೆ. ರುವ ವಿಧಾನ ಸಭಾ ಚುನಾವಣೆಯಲ್ಲಿ ಬಿಎಸ್‌ಪಿ ಹಾಗೂ ಎನ್‌ಸಿಪಿ ಜತೆ ಸ್ಥಾನ ಹೊಂದಾಣಿಕೆ ಮಾಡಿಕೊಳ್ಳಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.

RELATED ARTICLES  ಬೆಂಕಿ ತಗುಲಿ ಗುಡಿಸಲು ಭಸ್ಮ