ಪವರ್ ಗ್ರೀಡ್ ಕಾರ್ಪೋರೇಷನ್ ಆಫ್ ಇಂಡಿಯಾ ಲಿಮಿಟೆಡ್ (ಪಿಜಿಸಿಐಎಲ್) ನಲ್ಲಿನ ಎಕ್ಸಿಕ್ಯೂಟಿವ್ ಟ್ರೈನಿ ಹುದ್ದೆಗಳಿಗೆ ಯುಜಿಸಿ ನೆಟ್ ಪರೀಕ್ಷೆ ಮೂಲಕ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ.
ಹುದ್ದೆಗಳ ಸಂಖ್ಯೆ – 25
ಹುದ್ದೆಗಳ ವಿವರ
ಎಕ್ಸಿಕ್ಯೂಟಿವ್ ಟ್ರೈನಿ ಹುದ್ದೆಗಳು – 25
ವಿದ್ಯಾರ್ಹತೆ : ಸ್ನಾತಕೊತ್ತರ ಪದವಿ, ಡಿಪ್ಲೋಮಾ, ಎಂಬಿಎ ಶಿಕ್ಷಣ ಪಡೆದಿರಬೇಕು.
ವಯೋಮಿತಿ : ಕನಿಷ್ಠ ವಯೋಮಿತಿಯನ್ನು 28 ವರ್ಷಗಳಿಗೆ ನಿಗದಿ ಮಾಡಲಾಗಿದೆ. ಹಿಂದುಳಿದ ವರ್ಗದವರಿಗೆ 3 ವರ್ಷ, ಪ.ಜಾ, ಪ.ಪಂ ದವರಿಗೆ 5 ವರ್ಷ, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 10 ವರ್ಷದವರೆಗೆ ವಯೋಮಿತಿಯಲ್ಲಿ ಸಡಿಲತೆ ನೀಡಲಾಗಿದೆ.
ಶುಲ್ಕ : ಅರ್ಜಿ ಶುಲ್ಕ 500 ರೂ ನಿಗದಿಮಾಡಲಾಗಿದೆ. ನಿಗದಿತ ಶುಲ್ಕವನ್ನು ಆನ್ ಲೈನ್ ಮೂಲಕ ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 05-04-2018
ಹೆಚ್ಚಿನ ಮಾಹಿತಿಗಾಗಿ ಮತ್ತು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ವೆಬ್ ವಿಳಾಸ http://www.powergridindia.com ಗೆ ಭೇಟಿ ನೀಡಿ.