ಮಂಗಳೂರು: ಬಿಜೆಪಿ ಇತ್ತೀಚಿಗೆ ಮಂಗಳೂರಿನಲ್ಲಿ ಆಯೋಜಿಸಿದ್ದ ಜನಸುರಕ್ಷಾ ಯಾತ್ರೆಯ ವೇಳೆ ಬ್ಯಾನರ್‌, ಫ್ಲೆಕ್ಸ್‌ ಹಾಕಿದ್ದನ್ನು ದ.ಕ. ಜಿಲ್ಲಾಧಿಕಾರಿ ಮನಪಾ ಆಯುಕ್ತರಿಗೆ ನೊಟೀಸ್‌ ನೀಡಿ ತತ್‌ಕ್ಷಣ ತೆರವುಗೊಳಿಸಿದ್ದರು. ನಗರದಲ್ಲಿ ಫ್ಲೆಕ್ಸ್‌ -ಬ್ಯಾನರ್‌ ಕಾನೂನುಬಾಹಿರವಾಗಿ ಅಳವಡಿಸದಂತೆ ಜಿಲ್ಲಾಧಿಕಾರಿ ಆದೇಶ ನೀಡಿದ್ದರು. ಆದರೆ ಈ ಆದೇಶವನ್ನು ಉಲ್ಲಂಘಿಸಿ ನಗರದಲ್ಲಿ ಕಾಂಗ್ರೆಸ್‌ ಜನಾಶೀರ್ವಾದ ಯಾತ್ರೆಯ ಫ್ಲೆಕ್ಸ್‌ ಬ್ಯಾನರ್‌ಗಳನ್ನು ಅಳವಡಿಸಲಾಗಿದೆ ಎಂದು ದ.ಕ. ಜಿಲ್ಲಾ ಬಿಜೆಪಿ ವಕ್ತಾರ ಜಿತೇಂದ್ರ ಕೊಟ್ಟಾರಿ ಆರೋಪಿಸಿದ್ದಾರೆ.

RELATED ARTICLES  ಶ್ರೀ ಭಾರತೀ ವಿದ್ಯಾಪೀಠದಲ್ಲಿ ಸರಸ್ವತೀ ಪೂಜೆ ಹಾಗೂ ವಿದ್ಯಾರಂಭ

ಮಂಗಳೂರು ಬಿಜೆಪಿ ಕಚೇರಿಯಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜನಸುರಕ್ಷಾ ಯಾತ್ರೆಯ ಮುನ್ನಾದಿನ ಬಿಜೆಪಿ ಅಳವಡಿಸಿದ್ದ ಬ್ಯಾನರ್‌, ಫ್ಲೆಕ್ಸ್‌ಗಳನ್ನು ಮಾ. 5ರಂದು ಜಿಲ್ಲಾಧಿಕಾರಿ ಮೂಲಕ ತೆರವುಗೊಳಿಸಲು ಸಚಿವ ರಮಾನಾಥ ರೈ, ಸಚಿವ ಯು.ಟಿ. ಖಾದರ್‌, ಶಾಸಕ ಜೆ.ಆರ್‌. ಲೋಬೋ ಅವರ ಒತ್ತಡದ ಮೇರೆಗೆ ಕೆಲಸ ನಡೆದಿದೆ. ಜಿಲ್ಲಾಧಿಕಾರಿಯ ಆದೇಶ ಈಗಲೂ ಊರ್ಜಿತದಲ್ಲಿದೆ. ಆದರೆ ಕಾಂಗ್ರೆಸ್‌ನವರು ಫ್ಲೆಕ್ಸ್‌, ಬ್ಯಾನರ್‌ ಅಳವಡಿಸುವ ಮೂಲಕ ಜಿಲ್ಲಾಧಿಕಾರಿ ನೀಡಿರುವ ಆದೇಶ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿದರು.

RELATED ARTICLES  ಜಮೀರ್ ಕಾಂಗ್ರೆಸ್‌ನಲ್ಲಿ ಸಿಎಂ ಆಗಬಹುದು: ದೇವೇಗೌಡ ವ್ಯಂಗ್ಯ