ನವದೆಹಲಿ/ರಾಮನಗರ: ಚನ್ನಪಟ್ಟಣದಲ್ಲಿ ಸ್ಪರ್ಧಿಸಲು ನಮ್ಮಲ್ಲಿ ಸೂಕ್ತ ಅಭ್ಯರ್ಥಿಗಳಿಲ್ಲದ ಕಾರಣ ಕುಮಾರಸ್ವಾಮಿ ಸ್ಪರ್ಧೆಗೆ ಯಾವುದೇ ತಡೆ ಇಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಸ್ಪಷ್ಟಪಡಿಸಿದ್ದಾರೆ.
ಆದರೆ ಇತ್ತ ರಾಮನಗರದ ಕಾರ್ಯರ್ತರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದು, ಕ್ಷೇತ್ರ ಬಿಡದಂತೆ ಆಗ್ರಹಿಸಿದ್ದಾರೆ. ಹೀಗಾಗಿ ಇನ್ನೆರಡು ದಿನಗಳಲ್ಲಿ ನೀವೇ ರ್ಚಚಿಸಿ ಅಂತಿಮ ತೀರ್ಮಾನ ಮಾಡಿ ಎಂದು ಕಾರ್ಯಕರ್ತರಿಗೆ ಎಚ್ಡಿಕೆ ಮನವಿ ಮಾಡಿದ್ದಾರೆ. ಜೆಡಿಎಸ್ ಸಮಾವೇಶದಲ್ಲಿ ಕುಮಾರಸ್ವಾಮಿ ಮಾತನಾಡಿ, ರಾಮನಗರ ಮತ್ತು ಚನ್ನಪಟ್ಟಣ ನನ್ನ ಕಣ್ಣಿದ್ದಂತೆ, ಪ್ರತಿ ಕ್ಷೇತ್ರದಲ್ಲೂ ಗೆಲುವು ಸಾಧಿಸುವುದು ಮುಖ್ಯವಾಗಿದೆ. ರಾಮನಗರದ ಜನತೆ ಒಪ್ಪಿದರೆ ಮಾತ್ರ ಚನ್ನಪಟ್ಟಣದಿಂದ ಸ್ಪರ್ಧಿಸುತ್ತೇನೆ ಎಂದು ಎಚ್ಡಿಕೆ ತಿಳಿಸಿದರು.