ಕುಮಟಾ: ಫ್ರೆಂಡ್ಸ್ ಸರ್ಕಲ್ ಹೊಲನಗದ್ದೆ ಹಾಗೂ ಊರ ನಾಗರಿಕರ ಸಹಕಾರದೊಂದಿಗೆ ಯುಗಾದಿ ಸಂಭ್ರಮದ ಪ್ರಯುಕ್ತ ಸನ್ಮಾನ ಹಾಗೂ ಮನರಂಜನಾ ಕಾರ್ಯಕ್ರಮವನ್ನು ದಿನಾಂಕ 18-3-18 ರಂದು ಕುಮಟಾ ತಾಲೂಕಿನ ಹೊಲನಗದ್ದೆಯ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮವನ್ನು ಬಿಜೆಪಿ ಮುಖಂಡರು ಹಾಗೂ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ಅಧ್ಯಕ್ಷ ಶ್ರೀ ನಾಗರಾಜ ನಾಯಕ ತೊರ್ಕೆ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಹಿಂದೂಗಳ ಹೊಸ ವರ್ಷದ ಸಂಭ್ರಮಾಚರಣೆಯನ್ನು ಸಾಧಕರನ್ನು ಸನ್ಮಾನಿಸುವುದರೊಂದಿಗೆ ಮನರಂಜನಾ ಕಾರ್ಯಕ್ರಮವನ್ನು ಅತ್ಯಂತ ಹರ್ಷದೊಂದಿಗೆ ಆಚರಿಸುತ್ತಿರುವುದು ಸಂಭ್ರಮದ ವಾತಾವರಣವನ್ನು ಸೃಷ್ಟಿಸಿದೆ. ಈ ಶುಭ ಸಂದರ್ಭದಲ್ಲಿ ವೈದ್ಯಕೀಯ ಸೇವೆಯನ್ನು ಒದಗಿಸಿದ ಹಿರಿಯ ಆರೋಗ್ಯ ಸಹಾಯಕಿಯನ್ನು, ಶೈಕ್ಷಣ ಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಶಿಕ್ಷಕಿ ಸಾವಿತ್ರಿ ಎಸ್. ಭಟ್ ಹಾಗೂ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಡಿ.ಎಸ್.ಎಸ್. ಜಿಲ್ಲಾ ಕಾರ್ಯದರ್ಶಿಗಳಾದ ತಿಮ್ಮಪ್ಪ ಮುಕ್ರಿ ಅವರನ್ನೂ ಸನ್ಮಾನಿಸಿ ಗೌರವಿಸಿರುವುದು ಅತ್ಯಂತ ಅರ್ಥಪೂರ್ಣವಾಗಿದೆ. ಯಾವುದೇ ಕ್ಷೇತ್ರದಲ್ಲೂ ಸಾಧನೆ ಕೈಗೊಳ್ಳಬೇಕೆಂದರೆ ನಿಃಸ್ವಾರ್ಥ ಪ್ರಾಮಾಣ ಕ ಪ್ರಯತ್ನ ಅಗತ್ಯವಾಗಿದೆ. ಇಂತಹ ಸಂಘಟನೆಗಳಿಂದ ಸಮಾಜದಲ್ಲಿ ಒಗ್ಗಟ್ಟು ಮೂಡಲು ಸಾಧ್ಯವಾಗುತ್ತದೆ. ಈ ಸಂಘಟನೆಗಳು ಕೇವಲ ಮನರಂಜನಾ ಕಾರ್ಯಕ್ರಮಗಳಿಗೆ ಸೀಮಿತರಾಗದೇ ಸಮಾಜದಲ್ಲಿನ ಅಸಹಾಯಕರ, ಬಡವರ ಧ್ವನಿಯಾಗಿ ಕಾರ್ಯ ನಿರ್ವಹಿಸಬೇಕು. ಅವರಿಗೆ ಸರಕಾರದಿಂದ ಸಿಗುವ ಎಲ್ಲಾ ಅನುಕೂಲತೆಗಳನ್ನು ಒದಗಿಸುವ ನಿಟ್ಟಿನಲ್ಲಿ ಕಟಿಬದ್ಧರಾಗಿರಬೇಕು ಎಂದು ಕರೆ ನೀಡಿದರು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ತಾ.ಪಂ.ಸದಸ್ಯ ಜಗನ್ನಾಥ ಆರ್.ನಾಯ್ಕ ಅವರು ಮಾತನಾಡಿ ಕಾರ್ಯಕ್ರಮದ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ದಿನಕರ ಶೆಟ್ಟಿ, ಸುಬ್ರಾಯ ವಾಳ್ಕೆ, ಜಿ.ಪಂ. ಸದಸ್ಯರಾದ ಪ್ರದೀಪ ನಾಯಕ ದೇವರಬಾವಿ, ಗ್ರಾ.ಪಂ.ಸದಸ್ಯ ನಾಗೇಶ ನಾಯ್ಕ, ಗ್ರಾ.ಪಂ.ಸದಸ್ಯೆ ಶ್ರೀಮತಿ ರಮ್ಯಾ ಶೇಟ್, ಎಸ್.ಡಿ.ಎಮ್.ಸಿ.ಅಧ್ಯಕ್ಷೆ ಶ್ರೀಮತಿ ದೀಪಾ ಹಿಣ , ಗ್ರಾ.ಪಂ.ಸದಸ್ಯೆ ಶಾರದಾ ಪಟಗಾರ, ನಾಗಪ್ಪ ಮುಕ್ರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.