ಶ್ರೀರಂಗಪಟ್ಟಣ: ಇಲ್ಲಿನ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭಾನುವಾರ ನಸುಕಿನ ವೇಳೆ ಲಾರಿ, ಕ್ಯಾಂಟರ್, ಮಿನಿ ಬಸ್, ಮತ್ತು ಬೈಕ್ ಮಧ್ಯೆ ಭೀಕರ ಸರಣಿ ಅಪಘಾತ ಸಂಭವಿಸಿದ್ದು 12 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಆ ಪೈಕಿ ಮೂವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ.
ಗಾಯಾಳುಗಳಿಗೆ ಶ್ರೀರಂಗಪಟ್ಟಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಂತಾಜನಕ ಸ್ಥಿತಿಯಲ್ಲಿರುವ ಮೂವರನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲು ಮಾಡಲಾಗಿರುವ ಬಗ್ಗೆ ವರದಿಯಾಗಿದೆ.
ಶ್ರೀರಂಗಪಟ್ಟಣ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.