ಮೈಸೂರು: ಕೇಂದ್ರ ಸರ್ಕಾರದ ವಿರುದ್ಧ ಮಂಡಿಸಲಿರುವ ಅವಿಶ್ವಾಸ ನಿರ್ಣಯವನ್ನು ಎದುರಿಸಲು ಮೋದಿ ಭಯಗೊಂಡಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಟೀಕಿಸಿದ್ದಾರೆ,
ಮೈಸೂರಿನ ಮಹಾರಾಜ ಕಾಲೇಜಿನ ಮೈದಾನದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ,ಸಂಸತ್ತಿನಲ್ಲಿ ವಿರೋಧ ಪಕ್ಷ ಅವಿಶ್ವಾಸ ಗೊತ್ತುವಳಿ ನಿರ್ಣಯ ಮಂಡಿಸಲಿದೆ ಎಂಬ ವಿಚಾರವನ್ನು ತಿಳಿದ ಮೋದಿ ಸರ್ಕಾರ ಕಳೆದ 10 ದಿನಗಳಿಂದ ಭಯದಲ್ಲಿದೆ ಎಂದು ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರದ ವಿರುದ್ಧ ಪ್ರತಿಪಕ್ಷ ಕಾಂಗ್ರೆಸ್ ಅವಿಶ್ವಾಸ ನಿರ್ಣಯ ಮಂಡಿಸಲು ನಿರ್ಧರಿಸಿದ್ದು, ವೈಎಸ್ ಆರ್ ಸಿಪಿ ಮತ್ತು ಟಿಪಿಡಿಗಳು ಸಹ ಇದಕ್ಕೆ ಬೆಂಬಲ ಸೂಚಿಸಿವೆ.
ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನಕ್ಕಾಗಿ ಆಗ್ರಹಿಸುತ್ತಿರುವ ವೈಎಸ್‌ಆರ್ ಕಾಂಗ್ರೆಸ್ ಪಕ್ಷ ಅವಿಶ್ವಾಸ ಗೊತ್ತುವಳಿ ಮಂಡಿಸುವ ನಿರೀಕ್ಷೆ ಇದ್ದು, ಅದಕ್ಕೆ ಆಂಧ್ರದ ಆಡಳಿತಾರೂಢ ತೆಲುಗುದೇಶಂ ಪಕ್ಷ ಎನ್‌ಡಿಎದಿಂದ ಹೊರಬಂದಿದೆ.

RELATED ARTICLES  ಚಿಟ್ಟಾಣಿಯವರ ಬದುಕು ಹಾಗೂ ಯಕ್ಷ ಜೀವನದ ಕುರಿತದ ವ್ಯಕ್ತಿಶ್ರೀ