ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜನ ಅಧಿಕಾರ ಕೊಟ್ಟರೆ ಸರ್ಕಾರ. ಇಲ್ಲದಿದ್ದರೆ ಪ್ರತಿಪಕ್ಷದಲ್ಲಿ
ಕುಳಿತುಕೊಳ್ಳುತ್ತೇವೆಯೇ ಹೊರತು ಯಾರೊಂದಿಗೂ ಮೈತ್ರಿ ಇಲ್ಲವೆಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಹೇಳಿದ್ದಾರೆ.
ಬಿಜೆಪಿ ಜತೆ ನಿಂತು ಜೆಡಿಎಸ್ ಕೆಮ್ಮಿದರೆ ರಾಜ್ಯದಲ್ಲಿ ಕಾಂಗ್ರೆಸ್ ಧೂಳಿಪಟವಾಗುತ್ತದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿಕೆ ಕುರಿತಂತೆ ಈ ಪ್ರತಿಕ್ರಿಯೆ ನೀಡಿದ ಅವರು, ಸಿಟ್ಟಿನ ಭರದಲ್ಲಿ ಅವರು ಆ ಮಾತು ಹೇಳಿದ್ದಾರೆ. ಆದರೆ, ಯಾರೊಂದಿಗೂ ಮೈತ್ರಿ ಇಲ್ಲ ಎಂದು ಮೊದಲಿನಿಂದಲೂ ಕುಮಾರಸ್ವಾಮಿ ಹೇಳುತ್ತಿದ್ದಾರೆ. ಇದು ಪಕ್ಷದ ನಿಲುವು ಕೂಡ ಎಂದರು.
ಈ ಹಿಂದೆ ಕುಮಾರಸ್ವಾಮಿ ಬಿಜೆಪಿ ಜತೆ ಹೋಗಿರಬಹುದು. ನಂತರ ಅದರಿಂದ ಎಷ್ಟು ತೊಂದರೆ ಅನುಭವಿಸಿದರು ಎಂಬುದು ಅವರಿಗೆ ಮನವರಿಕೆಯಾಗಿದೆ. ಕಾಂಗ್ರೆಸ್ ನಮ್ಮನ್ನು ಯಾವ ರೀತಿ ನಡೆಸಿಕೊಳ್ಳುತ್ತಿದೆ ಎಂಬುದೂ ಗೊತ್ತಿದೆ. ಹೀಗಾಗಿ ಯಾರೊಂದಿಗೂ ಕೈಜೋಡಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.ಮುಂಬರುವ ಲೋಕಸಭೆ ಚುನಾವಣೆಗೆ ಆರೋಗ್ಯ ಸಹಕರಿಸಿದರೆ ಚುನಾವಣೆಗೆ ಸ್ಪರ್ಧಿಸುತ್ತೇನೆ.ಇಲ್ಲದಿದ್ದರೆ ಇಲ್ಲ ಎಂದು ಹೇಳಿದರು.