ಕುಮಟಾ: ಉತ್ತರ ಕನ್ನಡ ಜಿಲ್ಲಾ ಆಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಇಂಜಿನಿಯರಿಂಗ್ ಘಟಕ ಇವರ ಸಂಯುಕ್ತ ಆಶ್ರಯದಲ್ಲಿ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಮೂರೂರು(ಕಲ್ಲಬ್ಬೆ) ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಪ್ರಾಥಮಿಕ ಆರೋಗ್ಯ ಕೇಂದ್ರ ಕಟ್ಟಡಕ್ಕೆ ಭೂಮಿಪೂಜೆ ನೆರವೇರಿತು.
ಕುಮಟಾ-ಹೊನ್ನಾವರ ಕ್ಷೇತ್ರದ ಶಾಸಕರು ಹಾಗೂ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರೂ ಆದ ಶ್ರೀಮತಿ ಶಾರದಾ ಮೋಹನ್ ಶೆಟ್ಟಿಯವರು ಪಂಚಾಯತ್ ಪ್ರತಿನಿಧಿಗಳ, ಅಧಿಕಾರಿಗಳ ಹಾಗೂ ಊರ ನಾಗರಿಕರ ಉಪಸ್ಥಿತಿಯಲ್ಲಿ ಭೂಮಿಪೂಜೆ ನೆರವೇರಿಸಿದರು.
ಆರೋಗ್ಯದ ಅರಿವು ಮೂಡಿಸಿಕೊಂಡು ಎಲ್ಲರೂ ಸಂತಸದಿಂದ ಬಾಳುವಂತಾಗಬೇಕು. ಹಳ್ಳಿ ಹಳ್ಳಿಗಳಲ್ಲಿ ಆರೋಗ್ಯ ಕೇಂದ್ರಗಳು ನಿರ್ಮಾಣವಾಗಿ ಸಂಮೃದ್ಧ ಗ್ರಾಮ ನಮ್ಮದಾಗಲಿ ಎಂದು ಅವರು ಆಶಿಸಿದರು.
ಈ ಸಂದರ್ಭದಲ್ಲಿ ವಿ ಎಲ್ ನಾಯ್ಕ,ಕಲ್ಪನಾ ಗೌಡ ಹಾಗೂ ಹರೀಶ ಭಟ್ಟ ಹಾಗೂ ಇನ್ನಿತರರು ಉಪಸ್ಥಿತರಿದ್ದರು.