ನವದೆಹಲಿ: ರಾಜ್ಯ ವಿಧಾನಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದೆ. ಮೇ 12 ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಸಲು ಚುನಾವಣಾ ಆಯೋಗ ನಿರ್ಧರಿಸಿದೆ. ದೆಹಲಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿದ ಮುಖ್ಯ ಚುನಾವಣೆ ಆಯುಕ್ತ ಓಂ ಪ್ರಕಾಶ್ ರಾವತ್, 2018ರ ರಾಜ್ಯ ವಿಧಾನಸಭೆ ಚುನಾವಣೆಯ ಅಧಿಸೂಚನೆಯನ್ನು ಪ್ರಕಟಿಸಿದರು. ಇಂದಿನಿಂದಲೇ ನೀತಿ ಸಂಹಿತಿ ಜಾರಿಗೆ ಬರಲಿದೆ. ಮೇ 12 ರಂದು ಚುನಾವಣೆ ನಡೆಯಲಿದ್ದು, ಮೇ 15 ರಂದು ಫಲಿತಾಂಶ ಪ್ರಕಟವಾಗಲಿದೆ.
ಇನ್ನು ಚುನಾವಣಾ ನೀತಿ ಸಂಹಿತೆ ಇಂದಿನಿಂದಲೇ ಜಾರಿಗೆ ಬರಲಿದ್ದು, ಓರ್ವ ಅಭ್ಯರ್ಥಿಗೆ ಚುನಾವಣಾ ವೆಚ್ಚದ ಮಿತಿಯನ್ನು ಚುನಾವಣಾ ಆಯೋಗ ₹28 ಲಕ್ಷಕ್ಕೆ ಮಿತಿಗೊಳಿಸಿದೆ
ಇನ್ನೂ ರಾಜ್ಯ ಚುನಾವಣಾ ಆಯೋಗ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದೆ ಪಾರದರ್ಶಕವಾಗಿ ಚುನಾವಣೆ ನಡೆಸಲು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ನ್ಯಾಯಸಮ್ಮತ ಹಾಗೂ ನಿರ್ಭೀತಿಯಿಂದ ಜನರು ತಮ್ಮ ಹಕ್ಕು ಚಲಾಯಿಸುವ ಬಗ್ಗೆ ಈಗಾಗಲೆ ಎಲ್ಲಾ ಜಿಲ್ಲೆಗಳಲ್ಲಿ ಅಲ್ಲಿನ ಅಧಿಕಾರಿಗಳ ನೆರವಿನಿಂದ ಜಾಗೃತಿ ಮೂಡಿಸಿದ್ದಾರೆ.