ಬಾಗಲಕೋಟೆ, ಮಾ.28- ಮಗಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂಬ ಸುದ್ದಿ ತಿಳಿಯುತ್ತಿದ್ದಂತೆ ಪೋಷಕರು, ಸಂಬಂಧಿಕರು ಧಾವಿಸಿ ಮೃತಳ ಅತ್ತೆ -ಮಾವನಿಗೆ ಹಿಗ್ಗಾಮುಗ್ಗ ಥಳಿಸಿರುವ ಘಟನೆ ನಡೆದಿದೆ. ನವ ನಗರದ ರೂಪಾ (28) ಆತ್ಮಹತ್ಯೆ ಮಾಡಿಕೊಂಡಿರುವ ಗೃಹಿಣಿ. ನವನಗರದ ಮಂಜುನಾಥ್ ಎಂಬಾತನನ್ನು ರೂಪಾ ವಿವಾಹವಾಗಿದ್ದರು. ಹಲವು ತಿಂಗಳಿನಿಂದ ರೂಪಾಗೆ ಗಂಡನ ಮನೆಯವರು ಕಿರುಕುಳ ನೀಡುತ್ತಿದ್ದ ಬಗ್ಗೆ ರೂಪಾ ಪೋಷಕರು ರಾಜಿ ಪಂಚಾಯ್ತಿ ಮಾಡಿ ಸಮಾಧಾನಪಡಿಸಿದ್ದರು.

RELATED ARTICLES  ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣಕ್ಕೆ ಕ್ಷಣಗಣನೆ :

ಕೆಲ ದಿನಗಳ ನಂತರ ಮತ್ತೆ ಗಂಡನ ಮನೆಯವರು ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡುತ್ತಿದ್ದರಿಂದ ನೊಂದ ರೂಪಾ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಈ ಸುದ್ದಿ ತಿಳಿಯುತ್ತಿದ್ದಂತೆ ರೂಪಾ ಸಂಬಂಧಿಕರು ಮನೆ ಬಳಿ ಧಾವಿಸಿ ಈಕೆಯ ಅತ್ತೆ -ಮಾವನಿಗೆ ಹಿಗ್ಗಾಮುಗ್ಗ ಥಳಿಸಿದ್ದಾರೆ. ಸುದ್ದಿ ತಿಳಿದ ಬಾಗಲಕೋಟೆ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಎರಡೂ ಕಡೆಯವರನ್ನು ಸಮಾಧಾನಪಡಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

RELATED ARTICLES  ಸುಪ್ರೀಂಕೋರ್ಟ್‌ನ ಆದೇಶದಂತೆ ಹಿಂಬಡ್ತಿ ನೀಡುವ ಪ್ರಕ್ರಿಯೆ ತಕ್ಷಣದಿಂದ ಆರಂಭ.!