ಬೆಂಗಳೂರು: ಅರಬ್ಬೀ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ದಕ್ಷಿಣ ಕರ್ನಾಟಕದಲ್ಲಿ 2 ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಅರಬ್ಬೀ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ರಾಜ್ಯದ ವಿವಿಧೆಡೆ ಇಂದು, ನಾಳೆ ಮಳೆಯಾಗುವ ಸಾಧ್ಯತೆ ಇದೆ. ಪ್ರಮುಖವಾಗಿ ಕರ್ನಾಟಕದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಹಾಗೇ ಬೆಂಗಳೂರಿನಲ್ಲೂ ಸಣ್ಣಪ್ರಮಾಣದಲ್ಲಿ ಮಳೆ ಬೀಳಬಹುದು ಎಂದು ನೈಸರ್ಗಿಕ ಪ್ರಕೃತಿ ವಿಕೋಪ ಇಲಾಖೆ ಮೂಲಗಳು ತಿಳಿಸಿವೆ.
ಉಳಿದಂತೆ ರಾಜ್ಯದ ಇತರೆ ಭಾಗಗಳಲ್ಲಿ ಶುಷ್ಕ ಹವಾಮಾನಮ ಮುಂದುವರೆಯಲಿದ್ದು, ಬೆಂಗಳೂರಿನಲ್ಲಿ ಗರಿಷ್ಠ 33.9 ಡಿಗ್ರಿ ತಾಪಮಾನ ವಿರಲಿದೆ. ಕಲಬುರಗಿಯಲ್ಲಿ ಗರಿಷ್ಠ 41.8 ಡಿಗ್ರಿ ತಾಪಮಾನ ದಾಖಲಾಗಿದ್ದು, ಬಳ್ಳಾರಿಯಲ್ಲಿ ಗರಿಷ್ಠ 40 ಡಿಗ್ರಿ ತಾಪಮಾನ ದಾಖಲಾಗಿದೆ.

RELATED ARTICLES  ಗಣೇಶ ಹಬ್ಬಕ್ಕಾಗಿ 500 ಹೆಚ್ಚುವರಿ ಬಸ್..!