ಮಂಡ್ಯ, ಮಾ.30- ಜಮೀನು ಸಮಸ್ಯೆ ಬಗೆಹರಿಯದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಮುಂಭಾಗವೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಿಲ್ಲೆಯ ಹಲ್ಲಿಗೆರೆ ಗ್ರಾಮದ ಜಯಮ್ಮ (46) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಜಯಮ್ಮನ ಸಂಬಂಧಿಕರು ಜಮೀನು ಕಬಳಿಸಲು ಹುನ್ನಾರ ನಡೆಸಿ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದ್ದು, ಈ ಬಗ್ಗೆ ಜಯಮ್ಮ ಕೆರಗೋಡು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಆದರೆ, ಇಲ್ಲಿಯವರೆಗೂ ಜಮೀನಿನ ಸಮಸ್ಯೆ ಬಗೆಹರಿದಿರಲಿಲ್ಲ. ಈ ಸಂಬಂಧ ನ್ಯಾಯಕ್ಕಾಗಿ ನಿನ್ನೆ ಮಗನ ಜತೆ ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಭೇಟಿ ಮಾಡಲು ಬಂದಿದ್ದರು. ಈ ಸಂದರ್ಭದಲ್ಲಿ ಮಗ ಕಚೇರಿ ಒಳಗೆ ಹೋದಾಗ ಜಯಮ್ಮ ಹೊರಗಡೆ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತೀವ್ರ ಅಸ್ವಸ್ಥಗೊಂಡಿದ್ದ ಜಯಮ್ಮರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

RELATED ARTICLES  ಹಾಲು ಹಬ್ಬಕ್ಕೆ ಆಹ್ವಾನ.