ನವದೆಹಲಿ: ಮೂರು ವರ್ಷಗಳ ಹಿಂದೆ ಇರಾಕ್‌ನ ಮೋಸುಲ್‌ನಲ್ಲಿ ಐಎಸ್‌ ಉಗ್ರರಿಂದ ಹತ್ಯೆಯಾದ 39 ಮಂದಿ ಭಾರತೀಯರ ಮೃತದೇಹಗಳನ್ನು ಸೋಮವಾರ ಭಾರತಕ್ಕೆ ತರಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೃತದೇಹಗಳ ಹಸ್ತಾಂತರ ಪ್ರಕ್ರಿಯೆಗೆ ಸಂಬಂಧಿಸಿ ‘ವಿದೇಶಾಂಗ ವ್ಯವಹಾರಗಳ ಖಾತೆ ರಾಜ್ಯ ಸಚಿವ ವಿ.ಕೆ. ಸಿಂಗ್‌ ಅವರು ಇರಾಕ್‌ಗೆ ತೆರಳಿ ಇಡೀ ಪ್ರಕ್ರಿಯೆಯ ಮೇಲ್ವಿಚಾರಣೆ ನೋಡಿಕೊಂಡಿದ್ದಾರೆ’ ಎಂದು ಮೂಲಗಳು ತಿಳಿಸಿವೆ.

RELATED ARTICLES  ರಾಹುಲ್ ಗಾಂಧಿ ಜನ್ಮದಿನಕ್ಕೆ ಪ್ರಧಾನಿ ಮೋದಿ ಶುಭಹಾರೈಕೆ

ಅಮೃತಸರ, ಪಟ್ನಾ, ಕೋಲ್ಕತ್ತ, ಪಂಜಾಬ್‌ನ ಸಂಬಂಧಪಟ್ಟ ಕುಟುಂಬ ಸದಸ್ಯರಿಗೆ ಮೃತದೇಹಗಳನ್ನು ಹತ್ತಾಂತರ ಮಾಡಲಾಗುವುದಾಗಿ ತಿಳಿಸಿದ್ದಾರೆ.

ಮಾರ್ಚ್‌ 26ರಂದು ಮೃತರ ಕುಟುಂಬ ಸದಸ್ಯರನ್ನು ಭೇಟಿ ಮಾಡಿದ್ದ ವಿದೇಶಾಂಗ ವ್ಯವಹಾರಗಳ ಇಲಾಖೆ ಸಚಿವೆ ಸುಷ್ಮಾ ಸ್ವರಾಜ್, ‘ಮೃತದೇಹಗಳನ್ನು ಇನ್ನೊಂದು ವಾರದಲ್ಲಿ ಭಾರತಕ್ಕೆ ತರಲಾಗುವುದು’ ಎಂದು ಭರವಸೆ ನೀಡಿದ್ದರು.

RELATED ARTICLES  ಶ್ರೀಭಾರತೀ ವಿದ್ಯಾಲಯದಲ್ಲಿ ಯೋಗ ದಿನಾಚರಣೆ