ಮಂಡ್ಯ/ ಬೆಳಗಾವಿ, – ಚುನಾವಣೆ ಸಂಬಂಧ ನೀತಿ ಸಂಹಿತೆ ಜಾರಿಯಾದ ಕ್ಷಣದಿಂದ ಚೆಕ್‍ ಪೋಸ್ಟ್ ಗಳಲ್ಲಿ ಪೊಲೀಸರು ಕಾರ್ಯಪ್ರವೃತ್ತರಾಗಿ ಅಕ್ರಮವಾಗಿ ಹಣಸಾಗಿಸುವವರ ಮೇಲೆ ಹದ್ದಿನ ಕಣ್ಣಿಟ್ಟು ಲಕ್ಷಾಂತರ ರೂ. ವಶಪಡಿಸಿಕೊಂಡಿದ್ದಾರೆ.
ಮಂಡ್ಯ:
ಯಾವುದೇ ದಾಖಲೆಗಳಿಲ್ಲದೆ ಹಣಸಾಗಿಸುತ್ತಿದ್ದ ಕಾರನ್ನು ತಡೆದ ಗ್ರಾಮಾಂತರ ಪೊಲೀಸರು 2 ಸಾವಿರ ಹಾಗೂ 500 ರೂ. ಮುಖ ಬೆಲೆಯ 4 ಲಕ್ಷ ರೂ.ಗಳನ್ನು ವಶಪಡಿಸಿಕೊಂಡಿದ್ದಾರೆ. ಮಂಡ್ಯ-ಮೈಸೂರು ಹೆದ್ದಾರಿಯ ಜ್ಯೋತಿ ಇಂಟರ್ ನ್ಯಾಷನಲ್ ಹೋಟೆಲ್ ಬಳಿಯ ಕಿರಗಂದೂರು ಚೆಕ್‍ಪೋಸ್ಟ್ ಬಳಿ ಅನುಮಾನಾಸ್ಪದವಾಗಿ ಬಂದ ಕಾರನ್ನು ಗ್ರಾಮಾಂತರ ಠಾಣೆ ಪೊಲೀಸರು ಪರಿಶೀಲಿಸಿದಾಗ ಹಣ ಪತ್ತೆಯಾಗಿದೆ. ಕಾರಿನಲ್ಲಿದ್ದ ಬೆಂಗಳೂರಿನ ಜಿಗಣಿ ಮೂಲದ ಮೂವರನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.
ಬೆಳಗಾವಿ:
ಖಾನಾಪುರ ಚೆಕ್‍ಪೋಸ್ಟ್ ಬಳಿ ಗಸ್ತಿನಲ್ಲಿದ್ದ ಪೊಲೀಸರು ವಾಹನವನ್ನು ತಡೆದು ಒಬ್ಬನನ್ನು ವಶಕ್ಕೆ ಪಡೆದು 5 ಲಕ್ಷ ರೂ. ವಶಪಡಿಸಿಕೊಂಡಿದ್ದಾರೆ. ವಾಹನದಲ್ಲಿ ಅಕ್ರಮವಾಗಿ ಹಣಸಾಗಿಸುತ್ತಿದ್ದ ಬಗ್ಗೆ ಪೊಲೀಸರಿಗೆ ದೊರೆತ ಮಾಹಿತಿ ಮೇರೆಗೆ ವಾಹನ ತಡೆದು ತಪಾಸಣೆ ನಡೆಸಿ ಯಾವುದೇ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ 5 ಲಕ್ಷ ರೂ. ವಶಪಡಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

RELATED ARTICLES  ಖ್ಯಾತ ಹಾಸ್ಯ ನಟ ರಾಜು ಶ್ರೀವಾಸ್ತವ ಇನ್ನಿಲ್ಲ.