ನವದೆಹಲಿ: ಇತ್ತೀಚೆಗಂತೂ ಸೆಲ್ಫಿ ತೆಗೆದುಕೊಳ್ಳುವುದು ದಿನನಿತ್ಯದ ಅಭ್ಯಾಸವಾಗಿರುವಂತಿದೆ. ಸೆಲ್ಫಿಗಾಗಿ ಜೀವ ಕಳೆದುಕೊಂಡವರ ಘಟನೆಗಳು ಹೊಸದೇನಲ್ಲ. ಇಂತಹ ಘಟನೆಗಳಿಗೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಪ್ರವಾಸಿ ತಾಣಗಳಲ್ಲಿ ಸೆಲ್ಫಿ ನಿಷೇಧಿತ ವಲಯವನ್ನು ಗುರುತಿಸಿ ಮಾಹಿತಿ ನೀಡುವಂತೆ ಎಲ್ಲ ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ.

ಈ ಕುರಿತು ಮಂಗಳವಾರ ಲೋಕಸಭೆಯಲ್ಲಿ ಗೃಹ ಖಾತೆ ರಾಜ್ಯ ಸಚಿವ ಹಂಸರಾಜ್‌ ಗಂಗರಾಮ್‌ ಅಹಿರ್‌ ಉತ್ತರಿಸಿ, ಸೆಲ್ಫಿ ತೆಗೆಯುವಾಗ ಸಂಭವಿಸುವ ಅನಾಹುತಗಳನ್ನು ತಡೆಗಟ್ಟಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ಈ ಕುರಿತು ಪ್ರವಾಸೋದ್ಯಮ ಸಚಿವಾಲಯವು ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪ್ರವಾಸಿಗರನ್ನು ರಕ್ಷಿಸಲು ಮಾರ್ಗಸೂಚಿಗಳನ್ನು ಜಾರಿಗೊಳಿಸಿದೆ ಎಂದು ತಿಳಿಸಿದರು.

RELATED ARTICLES  ಸುರಿವ ಮಳೆಗೆ ಬೆಂಗಳೂರು ತತ್ತರ

ಜನಪ್ರಿಯ ಪ್ರವಾಸಿ ತಾಣಗಳಲ್ಲಿ ನೋ-ಸೆಲ್ಫಿ-ಝೋನ್ ಫಲಕ ಹಾಕುವುದು ಮತ್ತು ಅಪಘಾತ ವಲಯಗಳಲ್ಲಿ ಎಚ್ಚರಿಕೆ ಫಲಕಗಳನ್ನು ಹಾಕುವ ಮೂಲಕ ಪ್ರವಾಸಿಗರ ರಕ್ಷಣೆಗಾಗಿ ಎಲ್ಲ ರೀತಿಯ ಕ್ರಮ ಕೈಗೊಳ್ಳುವ ಮೂಲಕ ಸಂಭವನೀಯ ಅಪಾಯವನ್ನು ತಡೆಗಟ್ಟುವುದು ಆಯಾ ರಾಜ್ಯಗಳ ಜವಾಬ್ದಾರಿ ಎಂದು ಹೇಳಿದ್ದಾರೆ.

RELATED ARTICLES  ಇಂಡೋನೇಷ್ಯಾದಲ್ಲಿ ಸುನಾಮಿ ಅಬ್ಬರ : ಸುಮಾರು 222 ಕ್ಕೂ ಹೆಚ್ಚು ಮಂದಿ ಸಾವು.

ಪ್ರವಾಸೋದ್ಯಮ ತಾಣಗಳಲ್ಲಿ ಸ್ವಯಂ ಸೇವಕರಾಗಲು ಉದ್ದೇಶಿಸುವವರನ್ನು ಮತ್ತು ಪ್ರವಾಸಿ ಪೊಲೀಸರನ್ನು ನಿಯೋಜಿಸುವ ಕುರಿತು ಚಿಂತಿಸಲು ರಾಜ್ಯಗಳಿಗೆ ಮನವಿ ಮಾಡಿದ್ದು, ಈ ಕುರಿತು ಸಾಮಾಜಿಕ ಜಾಲತಾಣ ಮತ್ತು ಮಾಧ್ಯಮಗಳಲ್ಲಿ ಜಾಗೃತಿ ಮೂಡಿಸಲು ಸಲಹೆ ನೀಡಿದೆ