ಜೋಧಪುರ: ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ ದೋಷಿ ಎಂದು ಇಲ್ಲಿನ ನ್ಯಾಯಾಲಯ ತೀರ್ಪು ನೀಡಿದೆ.

ಪ್ರಕರಣದಲ್ಲಿ ಸಲ್ಮಾನ್ ಖಾನ್ ಹೊರತುಪಡಿಸಿ ಇತರ ಆರೋಪಿಗಳನ್ನು ಖುಲಾಸೆಗೊಳಿಸಲಾಗಿದೆ. ನಟರಾದ ಸೈಫ್ ಅಲಿ ಖಾನ್, ಸೋನಾಲಿ ಬೇಂದ್ರೆ, ಟಬು ಮತ್ತು ನೀಲಂ ಅವರನ್ನು ಸಹ ಆರೋಪಿಗಳನ್ನಾಗಿ ಪರಿಗಣಿಸಲಾಗಿತ್ತು.

RELATED ARTICLES  ಶ್ರೀ ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ : ಇಂದು ಹೆಚ್ಚಿನ ಚಿಕಿತ್ಸೆಗಾಗಿ ಚೆನ್ನೈಗೆ ಶಿಫ್ಟ್.

ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಯನ್ನು ಮಾರ್ಚ್‌ 28ರಂದು ಮುಕ್ತಾಯಗೊಳಿಸಿದ್ದ ನ್ಯಾಯಾಲಯ ತೀರ್ಪನ್ನು ಕಾಯ್ದಿರಿಸಿತ್ತು.

1998ರಲ್ಲಿ ಹಮ್ ಸಾಥ್ ಸಾಥ್ ಹೈ ಸಿನಿಮಾ ಶೂಟಿಂಗ್​ ವೇಳೆ ಜೋಧಪುರ ಸಮೀಪದ ಕಂಕಣಿ ಗ್ರಾಮದಲ್ಲಿ ಸಲ್ಮಾನ್ ಖಾನ್​ ಎರಡು ಕೃಷ್ಣಮೃಗಗಳನ್ನು ಬೇಟೆಯಾಡಿದ್ದರು. ಈ ಬೇಟೆಗೆ ಪರವಾನಗಿ ಇಲ್ಲದ ಬಂದೂಕು ಬಳಕೆ ಮಾಡಲಾಗಿತ್ತು ಎಂಬ ಆರೋಪವಿದೆ. ರಕ್ಷಿತಾರಣ್ಯ ಪ್ರದೇಶದಲ್ಲಿ ಕೃಷ್ಣಮೃಗ ಬೇಟೆಯಾಡಿದ್ದ ಸಲ್ಮಾನ್​ ಖಾನ್​ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯ ಸೆಕ್ಷನ್ 9/51 ಮತ್ತು ಅಕ್ರಮ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

RELATED ARTICLES  ಮರಕ್ಕೆ ಡಿಕ್ಕಿಯಾದ ಲಾರಿ : ಕಾರು ಮತ್ತು ಗೂಡ್ಸ್ ರಿಕ್ಷಾ ನಡುವೆ ಅಪಘಾತ