ಮೈಸೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಶೀಘ್ರಲಿಪಿಗಾರರ ಹುದ್ದೆಗಳ ನೇರ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ.

ಹುದ್ದೆಗಳ ಸಂಖ್ಯೆ : 07
ಹುದ್ದೆಗಳ ವಿವರ
ಶೀಘ್ರಲಿಪಿಗಾರರ ಹುದ್ದೆ
ವಿದ್ಯಾರ್ಹತೆ : ಎಸ್ ಎಸ್ ಎಲ್ ಸಿ ಯಲ್ಲಿ ಉತ್ತೀರ್ಣರಾಗಿರಬೇಕು. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಕನ್ನಡ ಮತ್ತು ಆಂಗ್ಲ ಹಿರಿಯ ಶ್ರೇಣಿ ಬೆರಳಚ್ಚು, ಶೀಘ್ರಲಿಪಿ ಪರೀಕ್ಷೆ ಅಥವಾ ಇದಕ್ಕೆ ಸಮನಾದ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕಚೇರಿ ಕಾರ್ಯ ಕಲಾಪಗಳಿಗೆ ಸಂಬಂಧಿಸಿದಂತೆ ಕಂಪ್ಯೂಟರ್ ಬಳಕೆಯ ಜ್ಞಾನ ಹೊಂದಿರಬೇಕು.
ವಯೋಮಿತಿ : ಸಾಮಾನ್ಯ ವರ್ಗದವರಿಗೆ 18 ರಿಂದ 35 ವರ್ಷ ವಯೋಮಿತಿ ನಿಗದಿ ಮಾಡಲಾಗಿದೆ. 2ಎ, 2ಬಿ, 3ಎ, 3ಬಿ ವರ್ಗದ ಅಭ್ಯರ್ಥಿಗಳಿಗೆ 38 ವರ್ಷ, ಪ.ಜಾ, ಪ.ಪ, ಪ್ರ-1ರ ಅಭ್ಯರ್ಥಿಗಳಿಗೆ 40 ವರ್ಷದವರೆಗೆ ವಯೋಮಿತಿಯಲ್ಲಿ ಸಡಿಲತೆ ನೀಡಲಾಗಿದೆ.
ಶುಲ್ಕ : ಸಾಮಾನ್ಯ ವರ್ಗದವರಿಗೆ 200 ರೂ, ಪ್ರ-2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 100 ರೂ, ಪ.ಜಾ, ಪ.ಪಂ ಮತ್ತು ಪ್ರ-1 ವರ್ಗದವರಿಗೆ ಶುಲ್ಕದಿಂದ ವಿನಾಯ್ತಿ ನೀಡಲಾಗಿದೆ.
ಅರ್ಜಿ ಸಲ್ಲಿಸಲು ಕಡೆಯ ದಿನಾಂಕ : 02-05-2018

RELATED ARTICLES  ಸ್ವ ಉದ್ಯೋಗ ತರಬೇತಿ ಕಾರ್ಯಾಗಾರ

ಹೆಚ್ಚಿನ ಮಾಹಿತಿಗಾಗಿ ಮತ್ತು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ವೆಬ್ ಸೈಟ್ ವಿಳಾಸ http://ecourts.gov.in/india/karnataka/mysuru/recruitment ಗೆ ಭೇಟಿ ನೀಡಿ.

RELATED ARTICLES  ಅ.೨೯ ಕ್ಕೆ ಕುಮಟಾ ತಾಲೂಕಾ ತೃತೀಯ ಚುಟುಕು ಸಾಹಿತ್ಯ ಸಮ್ಮೇಳನ