ಬೆಂಗಳೂರು: ಬೆಂಗಳೂರು ನಗರದಲ್ಲಿ ಈಗಿರುವ 12 ಮಂದಿ ಬಿಜೆಪಿ ಶಾಸಕರಿಗೆ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಸಿಗಲಿದೆ. ನಿನ್ನೆ ಪಕ್ಷದ ಮುಖಂಡರು ಎರಡನೇ ಬಾರಿಗೆ ಸಭೆ ಸೇರಿ 130 ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ತಯಾರಿಸಿದರು.
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮುರಳೀಧರ ರಾವ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಬೆಂಗಳೂರು ನಗರದ 28 ವಿಧಾನಸಭಾ ಕ್ಷೇತ್ರಗಳ ಪೈಕಿ ಸದ್ಯ 14 ವಿಧಾನಸಭಾ ಕ್ಷೇತ್ರಗಳಿಗೆ ಇಬ್ಬರು ಅಥವಾ ಮೂವರು ಅಭ್ಯರ್ಥಿಗಳ ಹೆಸರುಗಳನ್ನು ಅಂತಿಮಗೊಳಿಸಲಾಗಿದೆ.
ಮೂಲಗಳ ಪ್ರಕಾರ, ವಿಜಯನಗರ ಮತ್ತು ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಇನ್ನೂ ಪಕ್ಷದ ಮುಖಂಡರು ನಿರ್ಧರಿಸಿಲ್ಲ. ವಸತಿ ಸಚಿವ ವಿಜಯನಗರ ಕ್ಷೇತ್ರ ಪ್ರತಿನಿಧಿಸುತ್ತಿರುವ ಎಂ.ಕೃಷ್ಣಪ್ಪ ಮತ್ತು ಅವರ ಪುತ್ರ ಪ್ರಿಯಾ ಕೃಷ್ಣ ಅವರನ್ನು ಓಲೈಸಲು ಪಕ್ಷ ಕಾರ್ಯತಂತ್ರ ರೂಪಿಸುತ್ತಿದೆ ಎನ್ನಲಾಗಿದೆ.
ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಕೇಂದ್ರ ಚುನಾವಣಾ ಸಮಿತಿಗೆ ಸಲ್ಲಿಸಿದ ಮೇಲೆ ಎಲ್ಲಿ ಅಂತಿಮ ನಿರ್ಧಾರವಾಗಲಿದೆ.
ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆಮಾಡಲಾಗುವುದು ಎಂದು ಮುರಳೀಧರ ರಾವ್ ಸುದ್ದಿಗಾರರಿಗೆ ತಿಳಿಸಿದ್ದಾರೆ. ಪಕ್ಷದ ಕಾರ್ಯಕರ್ತರು ಮತ್ತು ಆಯಾ ಕ್ಷೇತ್ರಗಳ ಜನರ ಅಭಿಪ್ರಾಯಗಳನ್ನು ಪಡೆದು ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು ಎಂದು ಮುರಳೀಧರ ರಾವ್ ತಿಳಿಸಿದ್ದಾರೆ.