ಸಿದ್ದಾಪುರ: ಅಡಕೆ ಸಮಸ್ಯೆ ಕುರಿತು ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ ಮತ್ತು ಕೃಷಿ ಸಚಿವ ರಾಧಾ ಮೋಹನ ಸಿಂಗ್ ಇವರನ್ನು ಕೇಂದ್ರ ಕೌಶಲ್ಯಾಭಿವೃದ್ಧಿ ಮಂತ್ರಿ ಅನಂತಕುಮಾರ ಹೆಗಡೆ ನೇತೃತ್ವದಲ್ಲಿ ಭೇಟಿ ಮಾಡಿ ಮನವಿ ನೀಡಲಾಯಿತು.
ಕೇಂದ್ರ ಸರ್ಕಾರ ಅಡಕೆ ಬೆಳೆಗಾರರ ಸಂಸ್ಥೆಗಳ ಮನವಿಗೆ ಸ್ಪಂದಿಸಿ ಅಡಕೆಯಲ್ಲಿನ ಆರೋಗ್ಯಕ್ಕೆ ಪೂರಕವಾದ ಅಂಶಗಳ ಬಗ್ಗೆ ಸಂಶೋಧನೆ ಮಾಡಲು ಕೇಂದ್ರಿಯ ಸಂಸ್ಥೆಗಳಾದ ಸಿಪಿಸಿ ಆರ್‍ಐ, ಸಿಎಫ್‍ಟಿಆರ್ ಗಳಿಗೆ ಆದೇಶಿಸಿ ಅದಕ್ಕೆ ತಗಲುವ ವೆಚ್ಚವನ್ನು ಕೇಂದ್ರ ಕೃಷಿ ಸಚಿವಾಲಯ ಭರಿಸಲು ಒಪ್ಪಿರುತ್ತದೆ ಎಂದು ಕೇಂದ್ರ ಸಚಿವರು ಈ ಸಂದರ್ಭದಲ್ಲಿ ತಿಳಿಸಿದರು.
ನಿಯೋಗದಲ್ಲಿ ರಾಜ್ಯ ಅಡಕೆ ಮಹಾಮಂಡಲ ಅಧ್ಯಕ್ಷ ಕಂಕೋಡಿ ಪದ್ಮನಾಭ, ಮ್ಯಾಮಕೋಸ್ ಉಪಾಧ್ಯಕ್ಷ ಸುಬ್ರಹ್ಮಣ್ಯ, ಕ್ಯಾಂಪ್ಕೋ ಅಧ್ಯಕ್ಷ ಸತೀಶ್ಚಂದ್ರ, ತುಮ್ಕೋಸ್ ಅಧ್ಯಕ್ಷ ಶಿವಕುಮಾರ್, ಟಿಎಸ್‍ಎಸ್ ನಿರ್ದೇಶಕ ಹಾಗೂ ಕ್ರ್ಯಾಂ ಉಪಾಧ್ಯಕ್ಷ ರವೀಂದ್ರ ಹೆಗಡೆ ಹಿರೇಕೈ ಇದ್ದರು.