ಮೂಡಲಗಿ: ಈಗ ನಡೆಯುತ್ತಿರುವ ವಿಧಾನ ಸಭೆ ಚುನಾವಣೆಯಲ್ಲಿ ಕಾಂಗ್ರೇಸ್ ಪಕ್ಷದ ಟಿಕೇಟ್ ಆಕಾಂಕ್ಷಿಯಾಗಿದ್ದು, ಪಕ್ಷದ ವರಿಷ್ಠರ ಸಮ್ಮತಿಯಾದರೆ ಅರಭಾಂವಿ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಇಲ್ಲವಾದರೆ ಜಿಲ್ಲೆ ಹಾಗೂ ರಾಜ್ಯಾಂದ್ಯಂತ ಪಕ್ಷದ ಪರವಾಗಿ ಕೆಲಸ ಮಾಡುತ್ತೇನೆಂದು ಅರಭಾಂವಿ ಕ್ಷೇತ್ರದ ಮುಖಂಡ ಅರವಿಂದ ದಳವಾಯಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅವರು ಇಂದು ಪ್ರಕಟವಾಗಿರುವ ವಿಜಯವಾಣಿ ದಿನಪತ್ರಿಕೆಯಲ್ಲಿಯ 2018 ರ ವಿಧಾನಸಭಾ ಚುನಾವಣೆಗೆ ಅರಭಾವಿ ಮತಕ್ಷೇತ್ರದ ಜೆ.ಡಿ.ಎಸ್. ಪಕ್ಷದ ಟಿಕೆಟ್ ಆಕಾಂಕ್ಷಿ ಎಂಬ ಸುದ್ದಿಗೆ ತಮ್ಮ ಪ್ರಕಟಣೆಯನ್ನು ತಿಳಿಸಿದ್ದಾರೆ. 2013 ರಲ್ಲಿಯೇ ಜೆ.ಡಿ.ಎಸ್. ಪಕ್ಷಕ್ಕೆ ರಾಜಿನಾಮೆ ನೀಡಿದ್ದು, ಹೀಗಾಗಿ ಆ ಪಕ್ಷದಿಂದ ಟಿಕೆಟ್ ಕೇಳುವ ಪ್ರಶ್ನೆಯೇ ಉದ್ಬವಿಸುವುದಿಲ್ಲ. ಇತ್ತೀಚೆಗೆ ನಾನು ಕಾಂಗ್ರೆಸ್ ಪಕ್ಷದ ವರಿಷ್ಠರ ಸಮ್ಮತಿಯೊಂದಿಗೆ ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದು, ಪಕ್ಷದ ಪ್ರಾಥಮಿಕ ಸದಸ್ಯತ್ವವನ್ನು ಪಡೆದುಕೊಂಡಿದ್ದೇನೆ. 2018 ರ ವಿಧಾನಸಭಾ ಚುನಾವಣೆಯಲ್ಲಿ ನಾನು ಕಾಂಗ್ರೆಸ್ ಪಕ್ಷದಿಂದ ಅರಭಾವಿ ವಿಧಾನಸಭಾ ಮತಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿರುವೆ.

RELATED ARTICLES  ಖ್ಯಾತ ಹಾಸ್ಯ ನಟ ರಾಜು ಶ್ರೀವಾಸ್ತವ ಇನ್ನಿಲ್ಲ.

ಈಗಾಗಲೇ ಕಾಂಗ್ರೆಸ್ ಪಕ್ಷದ ಟಿಕೆಟ್‍ಗಾಗಿ ಅರ್ಜಿ ಸಲ್ಲಿಸಿದ್ದೇನೆ. ಈ ಬಾರಿ ಕಾಂಗ್ರೆಸ್ ಪಕ್ಷ ಟಿಕೆಟ್ ನೀಡಿದಲ್ಲಿ ಅರಭಾಂವಿ ಮತಕ್ಷೇತ್ರದಿಂದ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ. ಟಿಕೇಟ್ ದೊರೆಯದೇ ಹೋದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಬೆಳಗಾವಿ ಜಿಲ್ಲೆ ಮತ್ತು ರಾಜ್ಯಾದ್ಯಂತ ಪ್ರಚಾರ ಮಾಡುತ್ತೇನೆಂದು ಹೇಳಿದ ಅವರು ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷದಲ್ಲಿಯೇ ತಮ್ಮ ರಾಜಕೀಯ ಭವಿಷ್ಯ ಕಂಡುಕೊಳ್ಳಲು ನಿರ್ಧರಿಸಿರುತ್ತೇನೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES  ಇಂದಿನ ದಿನ ನಿಮ್ಮ ಪಾಲಿಗೆ ಹೇಗಿದೆ ಗೊತ್ತೇ? ಇಲ್ಲಿದೆ ನೋಡಿ 16/04/2019 ರ ರಾಶಿ ಫಲ