ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಹಂಸಲೇಖ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು ಅವರನ್ನು ಬೆಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಖಾಸಗಿ ವಾಹಿಸಿ ರಿಯಾಲಿಟಿ ಶೋ ಕಾರ್ಯಕ್ರಮ ನಡೆಸಿಕೊಡುತ್ತಿದ್ದ ವೇಳೆ ಎದೆ ನೋವು ಕಾಣಿಸಿಕೊಂಡ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ ಗ್ಯಾಸ್ಟಿಕ್‍ನಿಂದ ಎದೆನೋವು ಕಾಣಿಸಿಕೊಂಡಿದ್ದು ಅಭಿಮಾನಿಗಳು ಆತಂಕಗೊಳ್ಳಬೇಕಾಗಿಲ್ಲ ಎಂದು ಕಾರ್ಯಕ್ರಮ ನಿರ್ವಾಹಕರು ಸ್ಪಷ್ಟನೆ ನೀಡಿದ್ದಾರೆ.

RELATED ARTICLES  ಧನ-ಜನಕ್ಕಿಂತ ಜ್ಞಾನಶಕ್ತಿ ಶ್ರೇಷ್ಠ: ರಾಘವೇಶ್ವರ ಶ್ರೀ