ಕಾರವಾರ:ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಮೊದಲ ಪಟ್ಟಿಯಲ್ಲೇ ತಮಗೆ ಲಭಿಸಿದ್ದು ಖುಷಿ ತಂದಿದೆ ಎಂದು ರೂಪಾಲಿ ನಾಯ್ಕಸಂತಸ ಹಂಚಿಕೊಂಡರು. ಅವರು ಪತ್ರಿಕಾಗೋಷ್ಟಿಯಲ್ಲಿ ಭಾಗವಹಿಸಿ ಮಾತನಾಡಿದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಏ.16ರಂದು ಬೆಳಿಗ್ಗೆ 11ಕ್ಕೆ ಕಾರವಾರಕ್ಕೆ ಆಗಮಿಸಿ, ಇಲ್ಲಿನ ಮೀನುಗಾರ ಮಹಿಳೆಯರ ಜೊತೆ ಸಂವಾದ ನಡೆಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಜಿ.ನಾಯ್ಕ ಹೇಳಿದರು. ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂವಾದದಲ್ಲಿ ಅವರು ಮೀನುಗಾರರ ಕಷ್ಟ, ಸಮಸ್ಯೆ, ಕೊರತೆಗಳು, ಅಗತ್ಯ ಮೂಲಸೌಕರ್ಯ ವ್ಯವಸ್ಥೆಗಳ ಬಗ್ಗೆ ಚರ್ಚಿಸಲಿದ್ದಾರೆ.

ಈ ಮೂಲಕ ಮೀನುಗಾರ ಮಹಿಳೆಯರು ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವಲ್ಲಿ ಮುಂದಿನ ದಿನದಲ್ಲಿ ಸಹಕಾರಿಯಾಗಲಿದೆ ಎಂದರು. ಬಿಜೆಪಿ ಹೈಕಮಾಂಡ್ ಘೋಷಣೆ ಮಾಡಿದ ಮೊದಲ ಪಟ್ಟಿಯಲ್ಲಿ ಜಿಲ್ಲೆಯ ರೂಪಾಲಿ ನಾಯ್ಕ ಹಾಗೂ ವಿಶ್ವೇಶ್ವರ ಹೆಗಡೆ ಕಾಗೇರಿಯ ಹೆಸರು ಘೋಷಣೆ ಮಾಡಿದ್ದಾರೆ. ಇನ್ನೆರಡು ದಿನದಲ್ಲಿ ಉಳಿದ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಲಿದ್ದಾರೆ ಎಂದರು. ಶಿರಸಿಯಲ್ಲಿ ಬಿಜೆಪಿ ಶಾಸಕರಿದ್ದರಿಂದ ಟಿಕೆಟ್ ಆಕಾಂಕ್ಷಿಗಳು ಇರಲಿಲ್ಲ. ಆದರೆ ಕಾರವಾರ-ಅಂಕೋಲಾ ಕ್ಷೇತ್ರದಲ್ಲಿ ಹೆಚ್ಚಿನ ಆಕಾಂಕ್ಷಿಗಳಿದ್ದರು. ಕ್ಷೇತ್ರದಲ್ಲಿ ಶೇ.50ಕ್ಕಿಂತ ಹೆಚ್ಚು ಮಹಿಳಾ ಮತದಾರರಿದ್ದರಿಂದ ರೂಪಾಲಿ ನಾಯ್ಕ ಅವರಿಗೆ ಟಿಕೆಟ್ ನೀಡಲಾಗಿದೆ. ಅಲ್ಲದೆ ಮಹಿಳೆಯರಿಗೆ ಸ್ಥಾನಮಾನ ನೀಡಬೇಕು ಎಂದು ರಾಜ್ಯ ನಾಯಕರು ಈ ಕ್ರಮಕೈಗೊಂಡಿದ್ದಾರೆಎಂದರು.

RELATED ARTICLES  ಬಹುದಿನಗಳ ವ್ಯಾಜ್ಯಕ್ಕೆ ತೆರೆ: ಶಿರಸಿ ಮಾರಿಕಾಂಬಾ ದೇವಾಲಯಕ್ಕೆ ಹಸ್ತಾಂತರವಾಯ್ತು ಜಾಗ.

ಉಳಿದ ಕ್ಷೇತ್ರದಲ್ಲೂ ಟಿಕೆಟ್ ಆಕಾಂಕ್ಷಿಗಳಿದ್ದಾರೆ. ಬಿಜೆಪಿ ಶಿಸ್ತಿನ ಪಕ್ಷವಾಗಿದ್ದು ನಾಯಕರು ಕೈಗೊಂಡ ನಿರ್ಣಯವನ್ನು ಎಲ್ಲರು ಒಪ್ಪಿಕೊಳ್ಳಲಿದ್ದಾರೆ ಎನ್ನುವ ಭರವಸೆ ಇದೆ. ಯಾರಿಗೇ ಟಿಕೆಟ್ ಸಿಕ್ಕರೂ ಉಳಿದ ಆಕಾಂಕ್ಷಿಗಳು ಪಕ್ಷದ ತತ್ವ ಸಿದ್ದಾಂತಕ್ಕೆ ಬದ್ಧರಾಗಿ ಪಕ್ಷದ ಗೆಲುವಿಗಾಗಿ ಶ್ರಮಿಸಿದ್ದಾರೆ ಎಂದ ಅವರು ಕಾರವಾರ-ಅಂಕೋಲಾ ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆಯ ಬಗ್ಗೆ ಪಕ್ಷದ ಹಿಂದುಳಿದ ವರ್ಗಗಳ ರಾಜ್ಯ ಕಾರ್ಯದರ್ಶಿ ರಾಮರಾವ್ ರಾಯ್ಕರ ಅವರು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದು ಪಕ್ಷದ ಶಿಸ್ತಿಗೆ ವಿರುದ್ಧವಾಗಿದೆ. ಶಿಸ್ತಿನ ವಿಚಾರದಲ್ಲಿ ಪಕ್ಷ ರಾಜಿ ಮಾಡಿಕೊಳ್ಳುವುದಿಲ್ಲ ಎಂದರು. ದೂರವಾಣಿ ಮೂಲಕ ಅವರ ಜೊತೆಗೆ ಚರ್ಚೆ ನಡೆಸಲಾಗಿದೆ. ಪಕ್ಷದೊಳಗೆ ಚರ್ಚಿಸಿ ಸಮಸ್ಯೆ ಬಗೆಹರಿಸಿಕೊಳ್ಳಬಹುದಿತ್ತು. ಆದರೂ ಅವರು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪಕ್ಷದ ವರಿಷ್ಠರಿಗೆ ವರದಿ ನೀಡಲಾಗಿದ್ದು ರಾಜ್ಯ ನಾಯಕರೇ ಆ ಬಗ್ಗೆ ಕ್ರಮಕೈಗೊಳ್ಳಲಿದ್ದಾರೆ ಎಂದರು.

ಕಾರವಾರ-ಅಂಕೋಲಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರೂಪಾಲಿ ನಾಯ್ಕ ಮಾತನಾಡಿ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಮೊದಲ ಪಟ್ಟಿಯಲ್ಲೇ ತಮಗೆ ಲಭಿಸಿದ್ದು ಖುಷಿ ತಂದಿದೆ. ಇದು ಎಲ್ಲ ಮಹಿಳೆಯರಿಗೆ ನೀಡಿದ ಗೌರವವಾಗಿದೆ. ತಮಗೆ ಟಿಕೆಟ್ ಸಿಕ್ಕಿಲ್ಲ ಎಂದು ಆಕಾಂಕ್ಷಿಗಳು ನಿರಾಸೆ ಹೊಂದಬಾರದು. ಎಲ್ಲರೂ ಒಗ್ಗೂಡಿ ಪಕ್ಷದ ಗೆಲುವಿಗೆ ಸಹಕರಿಸಬೇಕು. ಕಾರವಾರ- ಅಂಕೋಲಾ ಕ್ಷೇತ್ರದಲ್ಲಿ ಮಹಿಳಾ ಮತದಾರರು ಹೆಚ್ಚಿದ್ದಾರೆ. ಈ ಹಿನ್ನೆಲೆಯಲ್ಲಿ ಟಿಕೆಟ್ ನೀಡುವಾಗ ನನಗೆ ಆದ್ಯತೆ ನೀಡಲಾಯಿತು ಎಂದರು. ಕ್ಷೇತ್ರದಲ್ಲಿ ಯಾವುದೇ ಎದುರಾಳಿಗಳು ಬಿಜೆಪಿಗಿಲ್ಲ. ಬಿಜೆಪಿ ಗೆಲುವು ಖಂಡಿತ ಎಂದ ಅವರು ಇಷ್ಟು ದಿನ ಆಡಳಿತದಲ್ಲಿರುವ ನಾಯಕರಿಂದ ಕ್ಷೇತ್ರದ ಅಭಿವೃದ್ಧಿಯಾಗಿಲ್ಲ. ಕೇವಲ ರಸ್ತೆ, ನೀರು ಕಲ್ಪಿಸುವುದರಿಂದ ಅಭಿವೃದ್ಧಿಯಾಗುವುದಿಲ್ಲ. ಕ್ಷೇತ್ರದ ಅನೇಕ ಗ್ರಾಮೀಣ ಭಾಗಗಳು ಅಭಿವೃದ್ಧಿಯಾಗಿಲ್ಲ. ಇಲ್ಲಿನ ಸುಶಿಕ್ಷಿತರು ಗೋವಾ ರಾಜ್ಯಕ್ಕೆ ನೌಕರಿಗಾಗಿ ತೆರಳುತ್ತಿದ್ದಾರೆ. ಕ್ಷೇತ್ರದಲ್ಲಿ ಪರಿಸರ ಪೂರಕ ಕಾರ್ಖಾನೆ ಬರಬೇಕಾಗಿದೆ. ವೈದ್ಯಕೀಯ, ಶಿಕ್ಷಣ ಕ್ಷೇತ್ರದ ಅಭಿವೃದ್ಧಿಯ ಜೊತೆಗೆ ಕ್ಷೇತ್ರದಲ್ಲಿ ಕೈಗಾರಿಕೆಗಳು ಬರಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

RELATED ARTICLES  ಮಕ್ಕಳ ದಿನಾಚರಣೆ ವೈಭವ: ಮಕ್ಕಳ ಮನ ಗೆದ್ದ ಮಕ್ಕಳು

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ವಕ್ತಾರ ರಾಜೇಶ ನಾಯಕ, ಮಾಜಿ ಜಿಲ್ಲಾಧ್ಯಕ್ಷ ಎಂ. ಜಿ. ನಾಯ್ಕ, ಮುಖಂಡರಾದ ನಾಗರಾಜ ನಾಯಕ, ಗಣಪತಿ ಉಳ್ವೇಕರ್, ಭಾಸ್ಕರ್ ನಾರ್ವೇಕರ್, ಜಗದೀಶ ನಾಯಕ ಹಾಗೂ ಹಾಗೂ ಇದ್ದರು.