ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲಿರುವ ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಸೋಮವಾರ(ಏಪ್ರಿಲ್‌ 16) ಬಿಡುಗಡೆ ಆಗಲಿದೆ.

ಈ ಸಂಬಂಧ ದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಜಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಮತ್ತು ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರು ಭಾನುವಾರ ರಾತ್ರಿ ಚರ್ಚೆ ನಡೆಸಿದ್ದಾರೆ.

RELATED ARTICLES  ಜೆಡಿಎಸ್‍ನ ಏಳು ಮಂದಿ ಶಾಸಕರ ಅನರ್ಹತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‍ನಿಂದ ಯಾವುದೇ ಸೂಚನೆ ಬಂದಿಲ್ಲ : ಕೆ.ಬಿ.ಕೋಳಿವಾಡ.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ್ದ ಯಡಿಯೂರಪ್ಪ, ‘ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಏಪ್ರಿಲ್‌ 15ರಂದು ಅಂತಿಮಗೊಳಿಸಲಾಗುವುದು’ ಎಂದಿದ್ದರು.

ಆದರೆ, ಕಾಂಗ್ರೆಸ್‌ ಭಾನುವಾರ ರಾತ್ರಿ ಪಟ್ಟಿ ಬಿಡುಗಡೆಗೊಳಿಸಿದ ಕಾರಣ ಬಿಜೆಪಿ ತನ್ನ ಎರಡನೇ ಪಟ್ಟಿಯನ್ನು ಸೋಮವಾರ ಬಿಡುಗಡೆಗೊಳಿಸಲು ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.

RELATED ARTICLES  ನಿಮ್ಮ ಜನ್ಮರಾಶಿಗೆ ಅನುಗುಣವಾಗಿ (ದಿನಾಂಕ 03-04-2019) ಇಂದಿನ ದಿನ ಫಲಾನುಫಲಗಳು ಹೇಗಿರಲಿದೆ ಗೊತ್ತೆ?

ಸಂಸದರಾದ ಬಿ.ಎಸ್. ಯಡಿಯೂರಪ್ಪ, ಬಿ. ಶ್ರೀರಾಮುಲು, ವಿಧಾನಪರಿಷತ್‌ ವಿರೋಧ ಪಕ್ಷದ ನಾಯಕ ಕೆ.ಎಸ್‌.ಈಶ್ವರಪ್ಪ ಸೇರಿದಂತೆ ಈ ಬಾರಿ ಕಣಕ್ಕಿಳಿಯಲಿರುವ 72 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಏಪ್ರಿಲ್‌ 8ರಂದು ಬಿಡುಗಡೆ ಮಾಡಿತ್ತು.