ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುವುದು ಖಚಿತವಾಗಿದೆ.

ಮೈಸೂರು ಜಿಲ್ಲೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಈಗಾಗಲೇ ನಾಮಪತ್ರ ಸಲ್ಲಿಸಿರುವ ಅವರು, ಇದೇ 23 ಅಥವಾ 24ರಂದು ಬಾಗಲಕೋಟೆ ಜಿಲ್ಲೆ ಬಾದಾಮಿ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ಕ್ಷೇತ್ರದ ಹಾಲಿ ಶಾಸಕ ಬಿ.ಬಿ. ಚಿಮ್ಮನಕಟ್ಟಿ ಬದಲು, ದೇವರಾಜ ಪಾಟೀಲ ಅವರಿಗೆ ಪಕ್ಷ ಟಿಕೆಟ್ ನೀಡಿದೆ. ಟಿಕೆಟ್ ತಮಗೇ ನೀಡಬೇಕು ಎಂದು ಚಿಮ್ಮನಕಟ್ಟಿ ಪಟ್ಟು ಹಿಡಿದಿದ್ದರು. ಆದರೆ, ಮುಖ್ಯಮಂತ್ರಿ ಸ್ಪರ್ಧಿಸುವುದಾದರೆ ಕ್ಷೇತ್ರವನ್ನು ಬಿಟ್ಟುಕೊಡುವುದಾಗಿ ಆಕಾಂಕ್ಷಿ ಹಾಗೂ ಘೋಷಿತ ಅಭ್ಯರ್ಥಿಗಳು ತಿಳಿಸಿದ್ದರು.

RELATED ARTICLES  ದಿನಾಂಕ 06/06/2019ರ ದಿನ ಭವಿಷ್ಯ ಇಲ್ಲಿದೆ.

ಸಿದ್ದರಾಮಯ್ಯ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುವುದಕ್ಕೆ ಪಕ್ಷದ ಹೈಕಮಾಂಡ್ ಹಾಗೂ ರಾಜ್ಯದ ಪ್ರಮುಖ ನಾಯಕರು ವಿರೋಧ ವ್ಯಕ್ತಪಡಿಸಿದ್ದರು.

ಮುಖ್ಯಮಂತ್ರಿಯಾಗಿದ್ದವರು ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿದರೆ, ಸೋಲಿನ ಭೀತಿಯಿಂದ ಪಲಾಯನ ಮಾಡುತ್ತಿದ್ದಾರೆ ಎಂದು ವಿರೋಧ ಪಕ್ಷಗಳು ಟೀಕಿಸುತ್ತವೆ. ತಪ್ಪು ಸಂದೇಶ ರವಾನೆಯಾಗಲು ಇದು ಕಾರಣವಾಗುತ್ತದೆ ಎಂದು ಅವರು ಆಕ್ಷೇಪಿಸಿದ್ದರು.

RELATED ARTICLES  ಶ್ರೀ ಸಂಸ್ಥಾನದವರ ಆಶೀರ್ವಾದದಿಂದ ಯಶಸ್ವಿಯಾಯ್ತು ಉಚಿತ ಕಣ್ಣಿನ ಪೊರೆ ತಪಾಸಣಾ, ಶಸ್ತ್ರ ಚಿಕಿತ್ಸಾ ಶಿಬಿರ