ಹೊನ್ನಾವರ : ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಾಹುಲ್ ಗಾಂಧಿಯವರು ಗುರುವಾರ ದಿ. 26 ರಂದು ಹೊನ್ನಾವರದಲ್ಲಿ ರೋಡ್ ಶೋ ನಡೆಸಲಿದ್ದಾರೆ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ತಿಳಿಸಿದ್ದಾರೆ.

RELATED ARTICLES  ಜಿಲ್ಲಾ ಮಟ್ಟದ ಚಿತ್ರ ಕಲಾ ಸ್ಪರ್ಧೆಯಲ್ಲಿ ಮೂರೂರಿನ ರಾಘವೇಂದ್ರ ಎಂ ಗೌಡ ಪ್ರಥಮ.

ಅಂದು ಸಂಜೆ 4 ಗಂಟೆಗೆ ನಗರದ ಶರಾವತಿ ಸರ್ಕಲ್ ಬಳಿ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರು ರಾಹುಲ್‍ಗಾಂಧಿಯವರಿಗೆ ಭವ್ಯ ಸ್ವಾಗತ ನೀಡಲಿದ್ದಾರೆ.
ಕಾರಣ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು, ಸಾರ್ವಜನಿಕರು ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿ ರಾಹುಲ್ ಗಾಂಧಿಯವರಿಗೆ ತುಂಬು ಹೃದಯದ ಸ್ವಾಗತ ನೀಡುವಂತೆ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ಪತ್ರಿಕಾ ಪ್ರಕಟಣೆಯ ಮೂಲಕ ಮನವಿ ಮಾಡಿದ್ದಾರೆ.

RELATED ARTICLES  ರಮಣೀಯ ಅಘನಾಶಿನಿ.