ಬೆಂಗಳೂರು: ಜಯನಗರ ಬಿಜೆಪಿ ಶಾಸಕ ವಿಜಯ್ ಕುಮಾರ್ (60) ಗುರುವಾರ ರಾತ್ರಿ ನಿಧನರಾದರು.

ಹಲವು ದಿನಗಳಿಂದ ಅವರು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು. 2008 ಮತ್ತು 2013ರಲ್ಲಿ ಶಾಸಕರಾಗಿ ಆಯ್ಕೆ ಆಗಿದ್ದ ಅವರು, ಈ ಬಾರಿಯೂ ಕಣದಲ್ಲಿದ್ದರು. ಕ್ಷೇತ್ರದಲ್ಲಿ ಗುರುವಾರ ಚುನಾವಣಾ ಪ್ರಚಾರ ಮಾಡುವಾಗ ಕುಸಿದು ಬಿದ್ದ ಅವರನ್ನು ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿತ್ತು.

RELATED ARTICLES  ಪರೀಕ್ಷಾ ತರಬೇತಿ " ಪರೀಕ್ಷೆ-ನಿರೀಕ್ಷೆ " -ಪರೀಕ್ಷೆಯಲ್ಲಿ ಭಾಗಿಗಳಾಗಲು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಕಾರ್ಯಾಗಾರ.

‘ಆಸ್ಪತ್ರೆಗೆ ಕರೆತಂದಾಗಲೇ ಅವರ ಹೃದಯ ಬಡಿತ, ರಕ್ತದ ಒತ್ತಡ ಕುಸಿದಿತ್ತು. ಚಿಕಿತ್ಸೆ ಫಲಕಾರಿ ಆಗದೇ ರಾತ್ರಿ 1 ಗಂಟೆಗೆ ವಿಜಯ್‌ ಕುಮಾರ್‌ ವಿಧಿವಶರಾದರು’ ಎಂದು ಆಸ್ಪತ್ರೆಯ ನಿರ್ದೇಶಕ ಡಾ.ಮಂಜುನಾಥ್‌ ತಿಳಿಸಿದ್ದಾರೆ.

1958ರಲ್ಲಿ ಬೆಂಗಳೂರಿನಲ್ಲಿ ಜನಿಸಿದ ವಿಜಯ್‌ ಅವರು ಎಚ್‌ಎಎಲ್‌ ಮತ್ತು ಆರ್‌.ವಿ.ಪ್ರೌಢ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡಿದ್ದರು. ಸಿವಿಲ್‌ ಎಂಜಿನಿಯರಿಂಗ್‌ನಲ್ಲಿ ಬಿ.ಇ. ಪದವಿ ಪಡೆದಿದ್ದರು.

RELATED ARTICLES  ನಿಮ್ಮ ಇಂದಿನ ‌ದಿನ‌ ಹೇಗಿರಲಿದೆ? ದ್ವಾದಶ ರಾಶಿಗಳ ದಿನದ ಭವಿಷ್ಯ (03/01/2019)ಇಲ್ಲಿದೆ.

1990ರಲ್ಲಿ ಬಿಜೆಪಿ ಸೇರಿದ್ದ ಅವರು, ಪಕ್ಷದ ಬೆಂಗಳೂರು ನಗರ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ 12 ವರ್ಷಗಳ ಕಾಲ ದುಡಿದಿದ್ದರು. ನಂತರ ನಗರ ಘಟಕ ಅಧ್ಯಕ್ಷರೂ ಆಗಿದ್ದರು.