ಹುಬ್ಬಳ್ಳಿ: ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಬಿ.ಎಸ್.ಯಡಿಯೂರಪ್ಪನವರಿಗೆ ಕ್ಲೀನ್ ಚಿಟ್ ನೀಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಮತ್ತು ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಅವರು 5,000 ಕೋಟಿ ರೂಪಾಯಿ ಹಗರಣದಲ್ಲಿ ಜಾಮೀನು ಪಡೆದು ಹೊರಬಂದಿಲ್ಲವೆ ಎಂದು ಕೇಳಿದರು.

ಯಡಿಯೂರಪ್ಪ ವಿರುದ್ಧ ಆಧಾರರಹಿತ ಸುಳ್ಳು ಆಪಾದನೆಗಳನ್ನು ಮಾಡಿದರೆ ಅದು ವಾಪಸ್ಸು ಅವರಿಗೆ ತಿರುಗಿ ಬೀಳುವ ಸಾಧ್ಯತೆಯಿದೆ ಎಂದು ಪ್ರಧಾನಿ ಎಚ್ಚರಿಕೆ ನೀಡಿದರು. ಹುಬ್ಬಳ್ಳಿಯಲ್ಲಿ ನಿನ್ನೆ ತಮ್ಮ ನಾಲ್ಕನೇ ಹಾಗೂ ಕೊನೆಯ ದಿನದ ಚುನಾವಣಾ ಪ್ರಚಾರ ರ್ಯಾಲಿಯಲ್ಲಿ ಮಾತನಾಡಿದ ಅವರು, ಯಡಿಯೂರಪ್ಪನವರು ಮುಗ್ಧರು. ಕಾಂಗ್ರೆಸ್ ಅವರ ವಿರುದ್ಧ ಆಧಾರರಹಿತ ಆರೋಪಗಳನ್ನು ಹೊರಿಸುತ್ತಿದೆ. ಅವರ ವಿರುದ್ಧದ ಕೇಸಿನಲ್ಲಿ ಯಾವುದೂ ಸಾಬೀತಾಗಿಲ್ಲ ಎಂದು ಯಡಿಯೂರಪ್ಪನವರನ್ನು ಸಮರ್ಥಿಸಿಕೊಂಡರು.

RELATED ARTICLES  ನಿಮ್ಮ ರಾಶಿಯ ಪ್ರಕಾರ ನಿಮ್ಮ ಇಂದಿನ ದಿನ ಹೇಗಿರಲಿದೆ ಗೊತ್ತಾ? ದಿನಾಂಕ 30-10-2018 ರ ರಾಶಿ ಭವಿಷ್ಯ ಇಲ್ಲಿದೆ.

ಬಿಜೆಪಿ ಉದ್ಯೋಗ ಸೃಷ್ಟಿಸುವಲ್ಲಿ ವಿಫಲವಾಗಿದೆ ಎಂಬ ಕಾಂಗ್ರೆಸ್ ಆಪಾದನೆಯನ್ನು ತಳ್ಳಿ ಹಾಕಿದ ಅವರು, ಕಳೆದ ನಾಲ್ಕು ವರ್ಷಗಳಲ್ಲಿ ದೇಶದಲ್ಲಿ ಸುಮಾರು 100 ಮೊಬೈಲ್ ಕಂಪೆನಿಗಳು ಸ್ಥಾಪನೆಗೊಂಡಿವೆ. ಅದೇ ಯುಪಿಎ ಸರ್ಕಾರದ ಅವಧಿಯಲ್ಲಿ ಕೇವಲ 2 ಮೊಬೈಲ್ ಕಂಪೆನಿಗಳು ಸ್ಥಾಪನೆಗೊಂಡಿದ್ದವು. ವಿಮಾನ ನಿಲ್ದಾಣಗಳನ್ನು ಮೇಲ್ದರ್ಜೆಗೇರಿಸಿರುವುದರಿಂದ ದೇಶದ ಆರ್ಥಿಕ ಬೆಳವಣಿಗೆಗೆ ಸಹಕಾರಿಯಾಗಿತ್ತು. ಇಂದು ವಿಮಾನಗಳಲ್ಲಿ ಪ್ರಯಾಣಿಸುವವರ ಸಂಖ್ಯೆ ಅಧಿಕವಾಗಿದೆ. ಬಿಜೆಪಿ ನೀತಿಯಿಂದಾಗಿ ಸಾಮಾನ್ಯ ವ್ಯಕ್ತಿ ಕೂಡ ಇಂದು ವಿಮಾನದಲ್ಲಿ ಪ್ರಯಾಣಿಸಲು ಸಾಧ್ಯವಾಗುತ್ತಿದೆ ಎಂದರು.
ಅಭಿವೃದ್ಧಿಕಾರ್ಯಗಳನ್ನು ತ್ವರಿತಪಡಿಸಲು ಬಿಜೆಪಿಗೆ ಮತ ಚಲಾಯಿಸುವಂತೆ ಅವರು ಮತದಾರರಲ್ಲಿ ಮನವಿ ಮಾಡಿಕೊಂಡರು. ಬಿಜೆಪಿಯ ಅಭಿವೃದ್ಧಿ ಕೆಲಸಗಳನ್ನು ಪಟ್ಟಿ ಮಾಡಿದ ಅವರು, ಸುಮಾರು 1 ಲಕ್ಷ ಹಳ್ಳಿಗಳಿಗೆ ಆಪ್ಟಿಕಲ್ ಫೈಬರ್ ಕೇಬಲ್ ಸಂಪರ್ಕವನ್ನು ಅಳವಡಿಸಲಾಗಿದೆ. ಯುಪಿಎ ಆಡಳಿತಾವಧಿಯಲ್ಲಿ ಆಪ್ಟಿಕಲ್ ಫೈಬರ್ ಕೇಬಲ್ ನೆಟ್ ವರ್ಕ್ ಕೇವಲ 59 ಹಳ್ಳಿಗಳಿಗೆ ಮಾತ್ರ ಲಭ್ಯವಾಗುತ್ತಿತ್ತು ಎಂದು ಹೇಳಿದರು.

RELATED ARTICLES  ಸುಳ್ಳು, ವಿಕೃತ ಸುದ್ದಿ ಹರಡುತ್ತಿರುವವರಿಗೆ ಸಿಎಂ ಸಿದ್ದರಾಮಯ್ಯ ಸರ್ಕಾರದ ಬೆಂಬಲ: ಅನಂತ್ ಕುಮಾರ್ ಹೆಗಡೆ ಕಿಡಿ