ಹೈದರಾಬಾದ್​: ಹೈದರಾಬಾದ್​ಗೆ ತೆರಳಿರುವ ಕಾಂಗ್ರೆಸ್​ ಮತ್ತು ಜೆಡಿಎಸ್​ ಶಾಸಕರು ಇಂದು ರಾತ್ರಿ ಬೆಂಗಳೂರಿಗೆ ವಾಪಸ್​ ಬರುವ ಸಾಧ್ಯತೆ ಇದೆ ಎನ್ನಲಾಗಿದೆ.

ಹೈದರಾಬಾದ್​ನ ತಾಜ್​ ಕೃಷ್ಣ ಹೋಟೆಲ್​ನಲ್ಲಿ ಡಿ.ಕೆ. ಶಿವಕುಮಾರ್​ ಅವರು ಕಾಂಗ್ರೆಸ್​ ಶಾಸಕರೊಂದಿಗೆ ಸಭೆ ನಡೆಸುತ್ತಿದ್ದು, ಮುಂದಿನ ನಡೆಯ ಕುರಿತು ಚರ್ಚೆ ನಡೆಸುತ್ತಿದ್ದಾರೆ.

RELATED ARTICLES  ಗಗನಕ್ಕೆರುತ್ತಿರುವ ಪೆಟ್ರೋಲ್, ಡೀಸೆಲ್ ವ್ಯಾಟ್ ಇಳಿಕೆ ಅಸಾಧ್ಯ: ಸಿಎಂ ಎಚ್ ಡಿ ಕುಮಾರಸ್ವಾಮಿ.

ಇಂದು ಸಂಜೆ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಹೊರಡೋಣ, ತಡರಾತ್ರಿ ಹೋಟೆಲ್​ಗೆ ಹೋಗಿ ಬೆಳಗ್ಗೆ ನೇರವಾಗಿ ವಿಧಾನಸೌಧಕ್ಕೆ ತೆರಳೋಣ. ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ವಿಶ್ವಾಸಮತ ಯಾಚನೆಯಲ್ಲಿ ಯಡಿಯೂರಪ್ಪ ಸರ್ಕಾರದ ವಿರುದ್ಧ ಮತ ಚಲಾಯಿಸುವಂತೆ ಡಿ.ಕೆ. ಶಿವಕುಮಾರ್​ ಅವರು ಮನವಿ ಮಾಡಿದ್ದಾರೆ.

RELATED ARTICLES  ವಾಸೋಧ್ಯಮ ಕ್ಷೇತ್ರಕ್ಕೆ ವಿಶೇಷ ಒತ್ತು : 10 ಪ್ರವಾಸಿತಾಣಗಳಲ್ಲಿ ಕೇಬಲ್ ಕಾರ್, ರೋಪ್ ವೇ ಸೌಲಭ್ಯ

ಬಿಜೆಪಿ ನಾಯಕರಿಂದ ಕೊನೆಯ ಕ್ಷಣದವರೆಗೂ ನಿಮಗೆ ಕರೆ ಬರುತ್ತದೆ. ನೀವು ಎಚ್ಚರಿಕೆಯಿಂದ ಇರಬೇಕು ಎಂದು ಡಿಕೆಶಿ ಶಾಸಕರಿಗೆ ಮನವಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.