ಬೆಂಗಳೂರು: ಬಹುಮತ ಇಲ್ಲದೆಯೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಿ.ಎಸ್‌.ಯಡಿಯೂರಪ್ಪ ಶನಿವಾರ ವಿಶ್ವಾಸಮತ ಯಾಚನೆ ಭಾಷಣ ಆರಂಭಿಸಿದರು. ಆದರೆ ಬಳಿಕ ಅದನ್ನು ಹಿಂಪಡೆದು ರಾಜಭವನಕ್ಕೆ ತೆರಳಿ ರಾಜೀನಾಮೆ ನೀಡುವುದಾಗಿ ಘೋಷಿಸಿದರು.

104 ಸ್ಥಾನ ಗೆದ್ದ ಬಿಜೆಪಿಗೆ ಸರ್ಕಾರ ರಚಿಸಲು ರಾಜ್ಯಪಾಲ ವಜುಭಾಯಿ ವಾಲಾ ಆಹ್ವಾನ ನೀಡಿದ್ದರು. ಗುರುವಾರ ಬೆಳಿಗ್ಗೆ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸಿದ್ದರು.

RELATED ARTICLES  ಚುನಾವಣಾ ಸಂಬಂಧಿತ ಎಲ್ಲ ಮಾಹಿತಿ ಪಡೆಯಲು ಹಾಗೂ ದೂರುಗಳನ್ನು ಸಲ್ಲಿಸಲು ಕಂದಾಯ ಭವನದಲ್ಲಿ ಸಹಾಯವಾಣಿ ಕೇಂದ್ರಕ್ಕೆ ಚಾಲನೆ.

ಬಹುಮತ ಸಾಬೀತು ಪಡಿಸಲು ರಾಜ್ಯಪಾಲರು 15 ದಿನಗಳ ಗಡುವು ನೀಡಿದ್ದರು. ಆದರೆ, ಕಾಂಗ್ರೆಸ್‌–ಜೆಡಿಎಸ್‌ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌; ಶನಿವಾರ ಸಂಜೆಯೊಳಗೆ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚಿಸುವಂತೆ ಬಿಜೆಪಿಗೆ ಸೂಚನೆ ನೀಡಿತ್ತು.

RELATED ARTICLES  ಕಸಾಯಿಖಾನೆಯಲ್ಲಿ ಕೊನೆಯ ಕ್ಷಣಗಳನ್ನು ಎದುರಿಸುತ್ತಿರುವ ಐದು ಹೋರಿಗಳನ್ನು ರಕ್ಷಿಸಬೇಕಿದೆ

ವಿಧಾನಸಭೆಯ 222 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ 78 ಸ್ಥಾನ ಗೆದ್ದ ಕಾಂಗ್ರೆಸ್‌ ಮತ್ತು 38 ಸ್ಥಾನ ಗೆದ್ದ ಜೆಡಿಎಸ್‌, ಇಬ್ಬರು ಪಕ್ಷೇತರನ್ನೂ ಸೇರಿಸಿಕೊಂಡು ಮೈತ್ರಿ ಸರ್ಕಾರ ರಚಿಸುವ ಪ್ರಸ್ತಾವವನ್ನು ರಾಜ್ಯಪಾಲರ ಮುಂದಿಡಲಾಗಿತ್ತು.