ಬೆಂಗಳೂರು : ಹೆಚ್. ಡಿ. ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ -ಕಾಂಗ್ರೆಸ್ ಮೈತ್ರಿ ಸರ್ಕಾರ 24 ಗಂಟೆಯೊಳಗೆ ರಾಜ್ಯದ ರೈತರ ಸಾಲ ಮನ್ನಾ ಮಾಡದಿದ್ದರೆ ಸೋಮವಾರ ಕರ್ನಾಟಕ ಬಂದ್ ಆಚರಿಸುವುದಾಗಿ ವಿಧಾನಸಭೆ ಪ್ರತಿಪಕ್ಷ ನಾಯಕ ಬಿ.ಎಸ್. ಯಡಿಯೂರಪ್ಪ ಅವರ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ ಡಿ. ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ.

RELATED ARTICLES  ಮನೆಯೊಂದರಲ್ಲಿ ಬೆಂಕಿ ಅವಘಡ : ಒಂದೇ ಕುಟುಂಬದ ಆರು ಸದಸ್ಯರು ದಹನ

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಲ ಮನ್ನಾ ಮಾಡಬೇಕೆಂಬ ಬಿಜೆಪಿಯ ಒತ್ತಡ ಹಾಗೂ ಬೆದರಿಕೆ ತಂತ್ರಕ್ಕೆ ಕಾಂಗ್ರೆಸ್ ಬಗ್ಗುವುದಿಲ್ಲ , ನಾವು ಸರ್ಕಾರಕ್ಕೆ ಜವಾಬ್ದಾರರಾಗಿರುತ್ತೇವೆ. ಆದರೆ. ಬಿಜೆಪಿಗೆ ಒಳಿತಾಗಲಿ ಎಂದು ವರ್ತಿಸುವುದಿಲ್ಲ ಎಂದರು.

RELATED ARTICLES  ಪದವಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ : ಪರೀಕ್ಷೆ ಇಲ್ಲದೆಯೇ ಪಾಸ್..!

ಬಿಜೆಪಿ ಸಾರ್ವಜನಿಕ ಹಣವನ್ನು ಪೋಲು ಮಾಡುವುದಿಲ್ಲ ಎಂಬ ನಂಬಿಕೆ ಇದೆ. ಒಂದು ವೇಳೆ ಬಂದ್ ನಿಂದಾಗಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ಬಂದು, ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಹಾನಿ ಉಂಟುಮಾಡಿದ್ದರೆ, ಅದರ ಹೊಣೆಯನ್ನು ಬಿಜೆಪಿಯೇ ಹೊರಬೇಕಾಗುತ್ತದೆ ಎಂದು ಎಚ್ಚರಿಕೆಯ ಸಂದೇಶ ನೀಡಿದರು.