ಬೆಂಗಳೂರು: ಪ್ರೇಮ ವೈಫಲ್ಯದ ಹಿನ್ನೆಲೆಯಲ್ಲಿ ಹಲಸೂರು ಪೊಲೀಸ್ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದ ಗೃಹರಕ್ಷಕ ಸಿಬ್ಬಂದಿಯೊಬ್ಬ ವಿಷದ ಮಾತ್ರೆಗಳನ್ನು ನುಂಗುವ ದೃಶ್ಯವನ್ನು ಚಿತ್ರೀಕರಣ ಮಾಡಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಂತಾಮಣಿ ತಾಲ್ಲೂಕಿನ ಮೂಡಚಿಂತಲಹಳ್ಳಿಯಲ್ಲಿ ನಡೆದಿದೆ.

ಮೂಡಚಿಂತಲಹಳ್ಳಿ ಸುನಿಲ್ ಕುಮಾರ್ ಜಿ.(21) ಆತ್ಮಹತ್ಯೆ ಮಾಡಿಕೊಂಡಿರುವ ಗೃಹರಕ್ಷಕ ಸಿಬ್ಬಂದಿಯಾಗಿದ್ದಾನೆ. ಮೂರು ದಿನಗಳ ಹಿಂದೆ ನಡೆದಿರುವ ಘಟನೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹೋಂಗಾರ್ಡ್ ಆಗಿದ್ದ ಸುನಿಲ್ ಕುಮಾರ್.ಜಿ ರಜೆಯ ಮೇಲೆ ಸ್ವಗ್ರಾಮಕ್ಕೆ ಆಗಮಿಸಿದ್ದ ವೇಳೆ ಆತ್ಮಹತ್ಯೆಗೆ ಶರಣಾಗಿದ್ದಾನೆ. ಪ್ರೇಮ ವೈಫಲ್ಯದ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಶಂಕೆ ವ್ಯಕ್ತವಾಗಿದೆ.

RELATED ARTICLES  ಮುಳ್ಳೇರಿಯಾ ಮಂಡಲ ಸಭೆ ಸುಳ್ಯ ಧರ್ಮಾರಣ್ಯದಲ್ಲಿ

ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಯಾವುದೇ ಪತ್ರ ಪತ್ತೆಯಾಗಿಲ್ಲ. ಸಾವಿಗೂ ಮೊದಲು ತಾನೇ ಸ್ವತಃ ಮಾತ್ರೆ ಸೇವಿಸುವ ದೃಶ್ಯಗಳನ್ನು ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾನೆ. ಈ ಸಂಬಂಧ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

RELATED ARTICLES  ಇಂದಿನ ದಿನ ನಿಮ್ಮ ರಾಶಿಗೆ ಫಲಾಫಲಗಳು ಹೇಗಿವೆ ಗೊತ್ತಾ? ದಿನಾಂಕ 31/01/2019ರ ದಿನ ಭವಿಷ್ಯ ಇಲ್ಲಿದೆ.