ಮಂಗಳೂರು: ಮೆಕನು ಚೆಂಡಮಾರುತ ಪರಿಣಾಮ ಕರಾವಳಿ ಕರ್ನಾಟಕದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಈವರೆಗೂ ರಾಜ್ಯದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಮೆಕುನು ಚಂಡಮಾರುತ ಕಾರವಳಿಯಲ್ಲೂ ಸಾಕಷ್ಟು ಅವಾಂತರಗಳಿಗೆ ಕಾರಣವಾಗಿದ್ದು, ಮಂಗಳೂರು, ಉಡುಪಿ, ಕಾರವಾರದಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿದೆ. ಇನ್ನು ಮಹಾ ಮಳೆಗೆ ಈ ವರೆಗೂ ಇಬ್ಬರ ಬಲಿಯಾಗಿದ್ದು, ಪಡುಬಿದ್ರಿಯಲ್ಲಿ ಓರ್ವ ಬಾಲಕಿ ಮತ್ತು ಕರಾವಳಿಯಲ್ಲಿ ಗುಡ್ಡ ಕುಸಿದ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ.

RELATED ARTICLES  ಉತ್ತರಕನ್ನಡದ ಇಂದಿನ ಕೊರೋನಾ ಅಪ್ಡೇಟ್

ಕಾಪು ತಾಲೂಕಿನ ಪಡುಬಿದ್ರಿಯ ಪಾದೆಬೆಟ್ಟು ಎಂಬಲ್ಲಿ ಶಾಲೆಯಿಂದ ಹಿಂದಿರುಗುತ್ತಿದ್ದ ವಿದ್ಯಾರ್ಥಿನಿ ನೆರೆ ನೀರಿನಲ್ಲಿ ಕೊಚ್ಚಿ ಹೋಗಿದ್ದಾಳೆ. ಇಲ್ಲಿನ ನಿಧಿ ಆಚಾರ್ಯ ಎಂಬ 9 ವರ್ಷದ ಬಾಲಕಿ ಕಣ್ಮರೆಯಾಗಿದ್ದು, ನಿಧಿ ಆಚಾರ್ಯ ತನ್ನ ಅಕ್ಕ ನಿಶಾ ಆಚಾರ್ಯ ಜೊತೆ ಸೈಕಲ್ ನಲ್ಲಿ ಮನೆಗೆ ತೆರಳುತ್ತಿದ್ದಳು. ಪಟ್ಲ ಎಂಬಲ್ಲಿ ಕಿರು ಸೇತುವೆ ದಾಟುವಾಗ ಅವಘಡವಾಗಿದೆ. ರಭಸವಾಗಿ ಹರಿಯುತ್ತಿದ್ದ ನೀರು ಸೇತುವೆ ಮೇಲೆ ಬಂದಿತ್ತು. ಆ ರಭಸಕ್ಕೆ ಇಬ್ಬರು ಮಕ್ಕಳು ನೀರುಪಾಲಾಗಿದ್ದಾರೆ. ನಿಶಾ ಆಚಾರ್ಯಳನ್ನು ಸ್ಥಳೀಯರು ರಕ್ಷಿಸಿದ್ದಾರೆ.

RELATED ARTICLES  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲು.

ಕಣ್ಮರೆಯಾದ ನಿಧಿ ಆಚಾರ್ಯಳಿಗೆ ಶೋಧಕಾರ್ಯ ಮುಂದುವರಿದಿದೆ. ಪಡುಬಿದ್ರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಅಗ್ನಿಶಾಮಕ ಸಿಬ್ಬಂದಿ ಪೊಲೀಸರು ಹುಡುಕಾಟ ಮಾಡುತ್ತಿದ್ದಾರೆ. ವಿಪರೀತ ಮಳೆಯಿಂದಾಗಿ ರಕ್ಷಣಾ ಕಾರ್ಯಕ್ಕೆ ಅಡ್ಡಿಯಾಗಿದೆ.