ಕಾರವಾರ: ಮಕ್ಕಳ ಸೇವೆಯಲ್ಲಿ ನಿರತರಾದ ವ್ಯಕ್ತಿಗಳಿಗೆ ನೀಡುವ ರಾಜೀವ ಗಾಂಧಿ ಮಾನವ ಸೇವಾ ಪ್ರಶಸ್ತಿ ಹಾಗೂ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ವ್ಯಕ್ತಿ ಹಾಗೂ ಸಂಸ್ಥೆಗಳಿಗೆ ನೀಡುವ ರಾಷ್ಟ್ರ ಪ್ರಶಸ್ತಿಗಾಗಿ ಅರ್ಜಿಗಳನ್ನು ಅಹ್ವಾನಿಸಲಾಗಿದೆ.

ಕೇಂದ್ರ ಸರ್ಕಾರವು ಮಕ್ಕಳ ಅಭಿವೃದ್ಧಿ, ಮಕ್ಕಳ ರಕ್ಷಣೆ ಹಾಗೂ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ 10 ವರ್ಷಕ್ಕಿಂತ ಹೆಚ್ಚಿನ ಸೇವೆಯನ್ನು ಸಲ್ಲಿಸಿರುವಂತಹ ವ್ಯಕ್ತಿಗಳನ್ನು ಗುರುತಿಸಿ ರಾಜೀವ್‍ಗಾಂಧಿ ಮಾನವಸೇವಾ ಪ್ರಶಸ್ತಿಯನ್ನು 3 ವ್ಯಕ್ತಿಗಳಿಗೆ ನೀಡಿ ಗೌರವಿಸುತ್ತದೆ. ಪ್ರತಿ ವ್ಯಕ್ತಿಗೆ ನೀಡುವ ಪ್ರಶಸ್ತಿಯು ರೂ. 1. ಲಕ್ಷ ನಗದು ಬಹುಮಾನ, ಬೆಳ್ಳಿ ಫಲಕ ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿರುತ್ತದೆ.

RELATED ARTICLES  ಹೊನ್ನಾವರ ಮಂಡಲದಿಂದ ಚಿಟ್ಟಾಣಿಯವರಿಗೆ ಕೆಕ್ಕಾರಿನಲ್ಲಿ "ಭಾವನಮನ"

ಅರ್ಜಿ ಸಲ್ಲಿಸಲು ಜೂನ್ 8 ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸಬಯಸುವ ಜಿಲ್ಲಾ ವ್ಯಾಪ್ತಿಯಲ್ಲಿರುವ ವ್ಯಕ್ತಿ, ಸಂಸ್ಥೆಯವರು ನಿಗದಿಪಡಿಸಿದ ಅರ್ಜಿ ನಮೂನೆಗಳನ್ನು ಆಯಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಂದ ಅಥವಾ ಜಿಲ್ಲಾ ಉಪನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಾರವಾರ ಇವರ ಕಚೇರಿಯಿಂದ ಪಡೆದು, ಆಂಗ್ಲ ಭಾಷೆಯಲ್ಲಿ ಭರ್ತಿ ಮಾಡಿ ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಕಾರವಾರರವರಿಗೆ ಸಲ್ಲಿಸಬೇಕೆಂದು ತಿಳಿಸಲಾಗಿದೆ.

RELATED ARTICLES  ಏ.೨ ರಂದು ಮಹಾರಾಜ್ಞೀ ಶ್ರೀ ದುರ್ಗಾಪರಮೇಶ್ವರೀ ದೇವಾಲಯದಲ್ಲಿ ಯಕ್ಷಗಾನ.