muralidhar 2

ಮನುಷ್ಯನ ಹುಟ್ಟಿದಾಗಿನಿಂದ ಕಡೇವರೆವಿಗೂ ಯಾವುದೇ ತೊಂದರೆ ಇಲ್ಲದೆ ಜೀವನ ಮಾಡುತ್ತೇನೆ ಎಂದುಕೊಂಡಿದ್ದರೂ ಸಹ ಮನುಷ್ಯನಿಗೆ ತಿಳಿಯದೆ ಬರುವ ಕಂಡು ಕೇಳರಿಯದ ಖಾಯಿಲೆಗಳು, ಕೆಲವು ಖಾಯಿಲೆಗಳು ನಮ್ಮ ಆಹಾರ ಪದ್ದತಿಯಿಂದ ಬಂದರೆ, ಇನ್ನೂ ಕೆಲವು ಖಾಯಿಲೆಗಳು ಹೊರಗಿನ ಕೀಟಗಳು ಸೊಳ್ಳೆಗಳಿಂದ ಬರುತ್ತವೆ. ಇಲ್ಲಿವರೆವಿಗೂ ಕಂಡು ಕೇಳರಿಯದ ಭಯಂಕರ ಖಾಯಿಲೆಗಳು, ಡೆಂಗ್ಯೂ, ಹಕ್ಕಿಜ್ವರ, ಹೆಚ್.1 ಎನ್ 1 ಹಂದಿ ಜ್ವರ, ಇತ್ತೀಚೆಗಷ್ಟೇ ಸೇರ್ಪಡೆಯಾದ ಬಾವುಲಿ ಜ್ವರ ಹೀಗೆ ಅನೇಕ ರೀತಿಯ ಕಾಯಿಲೆಗಳಿಗೆ ಮನುಷ್ಯನು ತುತ್ತಾಗುತ್ತಿದಾನೆ. ವೈಜ್ಞಾನಿಕವಾಗಿ ಔಷದಿಗಳನ್ನು ಎಷ್ಟೇ ಕಂಡು ಹಿಡಿದರೂ, ಮಾನವನಿಗೆ ಸವಾಲಾದಂತೆ ಅನೇಕ ಕಾಯಿಲೆಗಳು ಹೊಸದಾಗಿ ಹುಟ್ಟಿಕೊಂಡಿವೆ. ಇದರಿಂದ ಮನುಷ್ಯ ಕೃಶನಾಗಿ, ಆಯಸ್ಸು ಮುಗಿಯುವ ಮೊದಲೇ ಹೊರಟು ಹೋಗುವ ಅಪಾಯ ಎದುರಾಗುತ್ತಿದೆ.

ನಗರಗಳ ಜೀವನಕ್ಕೆ ಬಂದರೆ, ಅತಿಯಾದ ವಾಹನಗಳು, ವಾಹನಗಳು ಉಗಳುವ ಹೊಗೆಯಿಂದ ಬರುವ ಶ್ವಾಸಕೋಶಕ್ಕೆ ಸಂಬಂಧಿಸಿದ ಖಾಯಿಲೆಗಳು, ಇದರಿಂದಲೂ ಮನುಷ್ಯನ ಆಯಸ್ಸು ಕಡಿಮೆಯಾದಂತೆ ಆಗಿದೆ. ಹವಾಮಾನ ವೈಪರೀತ್ಯದಿಂದ ಅನೇಕ ಕಾಯಿಲೆಗಳು ಬಂದೆರಗುವುದುಂಟು. ವಾಹನಗಳಲ್ಲಿ ಪ್ರಯಾಣ ಮಾಡುವುದು ಒಬ್ಬರು ತನ್ನ ಪಾಡಿಗೆ ಸರಿಯಾಗಿ ಹೋಗುತ್ತಿದ್ದರೂ ಸಹ ಬೇರೆಯವರು ಬಂದು ಅಪಘಾತ ಮಾಡುವುದು. ಇದರಿಂದ ಆರೋಗ್ಯವಾಗಿದ್ದರೂ ಬೇಗನೇ ಮೃತರಾಗುತ್ತಾರೆ. ವಾಹನ ಅಪಘಾತಗಳಿಂದಲೂ ಎಷ್ಟೋ ಜನರ ಜೀವವೇ ಹೋಗಿದೆ. ಹೋಗುತ್ತಲೂ ಇದೆ. ಅವರನ್ನೇ ನಂಬಿರುವ ಕುಟುಂಬಗಳು ಅನಾಥವಾಗುತ್ತಾ ಇವೆ. ಇದರ ಜೊತೆಗೆ ತಮ್ಮದೇ ಆದ ನಿರ್ಲಕ್ಷತನ ಅತಿವೇಗವಾಗಿ ಹೋಗಬೇಕೆನ್ನುವ ಕೆಟ್ಟ ಗುಣ. ಸ್ವಲ್ಪ ತಾಳ್ಮೆಯಿಂದ ನಿಧಾನವಾಗಿ ಹೋದರೆ ಸುರಕ್ಷಿತವಾಗಿ ಮನೆಯನ್ನು ತಲುಪಬಹುದು. ವಾಹನಗಳಿಂದ ಸ್ವಲ್ಪ ಅಜಾಕರೂಕರಾದರೂ ಅಪಾಯ ಕಟ್ಟಿಟ್ಟ ಬುತ್ತಿ. ನಗರಗಳಲ್ಲಿ ಜನಗಳಿಗಿಂತ ವಾಹನಗಳೇ ಹೆಚ್ಚು ಓಡಾಡುತ್ತವೆ ಎನ್ನಬಹುದು.

RELATED ARTICLES  ಕಳೆದುಹೋಗುವ ಭಾವನೆಗಳು: ಸನ್ಮಾರ್ಗವೇ ಜೀವನದ ಹರುಷ ಲೇಖನ ಮಾಲೆಗಳು(ಭಾಗ - 2).

ಜೀವನದಲ್ಲಿ ನಿರಾಸೆಯಾದರೆ, ಪ್ರೇಮ ವೈಫಲ್ಯವಾದರೆ, ಪರೀಕ್ಷೆಗಳಲ್ಲಿ ಅನುತ್ತೀರ್ಣರಾದರೆ, ಅಥವಾ ಜೀವನದಲ್ಲಿ ತಮ್ಮದೇ ಆದ ಸಮಸ್ಯೆ, ಹಣಕಾಸಿನ ಸಮಸ್ಯೆ ಇದರಿಂದ ತಮ್ಮ ಜೀವವನ್ನು ತಾವೇ ತೆಗೆದುಕೊಳ್ಳಲು ಆತ್ಮಹತ್ಯೆಯಂತ ಮಾರ್ಗಕ್ಕೆ ಮೊರೆಹೋಗುವುದು. ಮನುಷ್ಯನ ಜೀವ ಅತ್ಯಮೂಲ್ಯ ವಾದದ್ದು, ಇದನ್ನು ಹಾಳುಮಾಡಿಕೊಳ್ಳಬಾರದೆಂಬುದನ್ನು ಮರೆತು ಎದುರಿಸಲು ಧೈರ್ಯವಿಲ್ಲದೆ ಅಥವಾ ಬೆಂಬಲಿಗರು ಇಲ್ಲದೆ, ತಮ್ಮ ಪ್ರಾಣವನ್ನು ತಾವೇ ತೆಗೆದುಕೊಳ್ಳುವವರು ಉಂಟು. ದ್ವೇಷಕ್ಕಾಗಿ, ಆಸ್ತಿಗಾಗಿ, ಬೇರೆ ರೀತಿಯ ಸಣ್ಣ ಸಣ್ಣ ಕಾರಣಗಳಿಗೆ ಬೇರೆಯವರ ಜೀವದ ಬೆಲೆಯನ್ನೇ ಅರ್ಥ ಮಾಡಿಕೊಳ್ಳದೆ ಜೀವವನ್ನು ತೆಗೆಯುವುದು.

RELATED ARTICLES  ಬದುಕಿಗೆ ಬಣ್ಣ ತುಂಬಿದವರು;-

ಪ್ರಕೃತಿ ವಿಕೋಪಗಳಿಂದಲೂ ಎಷ್ಟೋ ಜನರ ಆಯುಷ್ಯ ಅರ್ಧದಲ್ಲೇ ಮುಗಿಯುತ್ತದೆ. ಚಂಡಮಾರುತ, ಭೂಕಂಪ, ಮಳೆ ಸಿಡಿಲು ಇನ್ನೂ ಹೀಗೆ ಅನೇಕ ಪೃಕೃತಿ ವಿಕೋಪದಿಂದ ಮನುಷ್ಯನ ಜೀವವು ಹೋಗುವ ಸಂಭವ ಉಂಟು. ಪ್ರಕೃತಿ ವಿಕೋಪ ಯಾವಾಗ ಬೇಕಾದರೂ ಸಂಭವಿಸಬಹುದು. ಇದಕ್ಕೆ ಕಾಲ ವೇಳೆ ಯಾವುದೂ ಇಲ್ಲ. ಚಂಡಮಾರುತಗಳು ಒಮ್ಮೊಮ್ಮೆ ಹಳ್ಳಿಗಳ ಜೀವನವನ್ನೇ ಹಾಳುಗೆಡವಬಹುದು.

ಇದಕ್ಕೆಲ್ಲಾ ಹವಾಮಾನ ವೈಪರೀತ್ಯ. ಮನುಷ್ಯನ ದುಡುಕು ನಿರ್ಧಾರ, ಜೀವನ ನಡವಳಿಕೆ ಆಹಾರ ಸೇವನೆ, ದುಷ್ಚಟಗಳು ಇತ್ಯಾದಿಗಳೇ ಕಾರಣವಾಗಿದೆ. ತನ್ನ ಸ್ವಾರ್ಥಕ್ಕಾಗಿ ಕಾಡುಗಳಲ್ಲಿರುವ ಮರಗಳನ್ನು ಕಡಿದು, ಹಸಿರು ಕಾಡನ್ನು ಕಾಂಕ್ರೀಟ್ ಕಾಡು ಮಾಡಿದರೆ ಹವಾಮಾನ ಅಸಮತೋಲನ ಉಂಟಾಗಿ ಪ್ರಕೃತಿ ವಿಕೋಪಕ್ಕೆ ತಿರುಗಿ ಮನುಷ್ಯನ ಜೀವವನ್ನೇ ಬಲಿ ಪಡೆಯುತ್ತಿರುವ ಸನ್ನಿವೇಶಗಳು ಉಂಟಾಗುತ್ತಿದೆ.

ಇದಕ್ಕೆಲ್ಲಾ ಪರಿಹಾರವನ್ನು ಒಬ್ಬರು ತೆಗೆದುಕೊಂಡರೆ ಆಗುವುದಿಲ್ಲ. ಮೊದಲಿನಿಂದಲೂ ಇದರ ಬಗ್ಗೆ ಕಾಳಜಿವಹಿಸಿದ್ದರೆ ಈ ರೀತಿಯ ಪರಿಸ್ಥಿತಿ ಬರುತ್ತಿರಲಿಲ್ಲ. ಇದರಲ್ಲಿ ಕೆಲವು ಸಂಗತಿಗಳಿಗೆ ಮಾತ್ರ ಪರಿಹಾರವನ್ನು ಕಂಡುಕೊಳ್ಳಬಹುದು, ಪ್ರಕೃತಿಯಿಂದಾಗುವ ಅನಾಹುತಗಳಿಗೆ ಏನೂ ಮಾಡಲು ಸಾಧ್ಯವಿಲ್ಲ. ಅನುಭವಿಸಲೇ ಬೇಕಾದ ಅನಿವಾರ್ಯ ಸನ್ನಿವೇಶ ಬಂದೊದಗಿದೆ.