ಕಾರವಾರ:ಜೂನ್ 21ರಿಂದು ಅಂತಾರಾಷ್ಟ್ರೀಯ ಯೋಗ ದಿನ ಅಂಗವಾಗಿ ಬೆಳಿಗ್ಗೆ 6.30ಕ್ಕೆ ಜಿಲ್ಲಾ ಮಟ್ಟದ ಸಾಮೂಹಿಕ ಯೋಗ ಕಾರ್ಯಕ್ರಮವನ್ನು ನಗರದ ಗುರುಮಠ ಬಾಡ ನಡೆಯಲಿದೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ, ಪತಂಜಲಿ ಯೋಗ ಸಮಿತಿ ಕಾರವಾರ, ಶಿಕ್ಷಣ ಮತ್ತು ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆ, ಸಂಘ ಸಂಸ್ಥೆಗಳ ಸಹಯೋಗದಲ್ಲಿ ನಡೆಯುವ ಈ ಕಾರ್ಯಕ್ರಮವನ್ನು ಕಂದಾಯ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಆರ್. ವಿ. ದೇಶಪಾಂಡೆ ಉದ್ಘಾಟಿಸಲಿದ್ದಾರೆ.

RELATED ARTICLES  ನಿಯಂತ್ರಣ ತಪ್ಪಿ ಪಲ್ಟಿಯಾದ ಲಾರಿ

ಕೇಂದ್ರ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ರಾಜ್ಯ ಸಚಿವ ಅನಂತಕುಮಾರ್ ಹೆಗಡೆ ಗೌರವ ಉಪಸ್ಥಿತರಿದ್ದು ಶಾಸಕಿ ರೂಪಾಲಿ ನಾಯ್ಕ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲೆಯ ಎಲ್ಲ ಶಾಸಕರು, ಜನಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಸಾಮೂಹಿಕ ಯೋಗ ಕಾರ್ಯಕ್ರಮದಲ್ಲಿ ಯೋಗಾಸಕ್ತ ಪ್ರೌಢಶಾಲಾ ವಿದ್ಯಾರ್ಥಿಗಳು, ಎನ್.ಸಿ.ಸಿ. ಕೆಡೆಟಗಳು, ಪದವಿ ಪೂರ್ವ ಕಾಲೇಜ್ ವಿದ್ಯಾರ್ಥಿಗಳು ಮತ್ತು ಯೋಗಾಸಕ್ತ ವಿವಿಧ ಸಂಘ ಸಂಸ್ಥೆಗಳ ಕಾರ್ಯಕರ್ತರು, ಆಶಾ ಕಾರ್ಯಕರ್ತರು, ಸರ್ಕಾರಿ ನೌಕರರು ಹಾಗೂ ಸಾರ್ವಜನಿಕರು ಈ ಯೋಗಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

RELATED ARTICLES  ತಾ.ಪಂ ಮಾಜಿ ಸದಸ್ಯ ಈಶ್ವರ ನಾಯ್ಕ ಸೇರಿ ಹಲವರು ಕಾಂಗ್ರೆಸ್ ಗೆ ಸೇರ್ಪಡೆ.

ದಿನಾಂಕ ಜೂನ್ 20ರಂದು ಮಧ್ಯಾಹ್ನ 2.30ಕ್ಕೆ ಯೋಗ ನಡಿಗೆ ಕಾರ್ಯಕ್ರಮವನ್ನು ಜಿಲ್ಲಾ ಆಯುಷ್ ಅಧಿಕಾರಿಗಳ ಕಚೇರಿಯಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ನಡೆಯಲಿದ್ದು ಈ ಯೋಗ ನಡಿಗೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಜಿಲ್ಲಾ ಆಯುಷ್ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು, ನರ್ಸಿಂಗ್ ವಿದ್ಯಾರ್ಥಿಗಳು, ಎನ್.ಸಿ.ಸಿ. ಕೆಡೆಟಗಳು, ಆಶಾಕಾರ್ಯಕರ್ತರು, ಶಾಲಾ ಕಾಲೇಜ್ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಎಲ್ಲಾ ಯೋಗ ಪಟುಗಳು ಯೋಗಮ್ಯಾಟ್‍ಗಳನ್ನು ತರುವಂತೆ ಸಂಘಟಕರು ಕೋರಿದ್ದಾರೆ.