ನವದೆಹಲಿ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಜನ್ಮದಿನದ ಶುಭಾಶಯ ಕೋರಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಅವರಿಗೆ ಸುದೀರ್ಘ ಆಯಸ್ಸು ಮತ್ತು ಆರೋಗ್ಯಕ್ಕಾಗಿ ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.

RELATED ARTICLES  ಸತತ ಎರಡನೇ ದಿನವೂ ಏರಿಕೆ ಕಂಡ ಕೊರೋನಾ ಕೇಸ್..!

48 ನೇ ವರ್ಷದ ಜನ್ಮದಿನ ಆಚರಿಸಿಕೊಳ್ಳುತ್ತಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು, ಮಾಜಿ ಪ್ರಧಾನಿ ರಾಜೀವ್ ಗಾಂಧಿ ಮತ್ತು ಸೋನಿಯಾ ಗಾಂಧಿ ಪುತ್ರರಾಗಿ ಜೂನ್ 19, 1970ರಂದು ಜನಿಸಿದರು. ಇವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಉಪಾಧ್ಯಕ್ಷರಾಗಿ, ಭಾರತೀಯ ಯುವ ಕಾಂಗ್ರೆಸ್ ಮತ್ತು ಭಾರತದ ರಾಷ್ಟ್ರೀಯ ವಿದ್ಯಾರ್ಥಿಗಳ ಒಕ್ಕೂಟದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದಾರೆ.

RELATED ARTICLES  ರಾಜ್ಯದ ಕರಾವಳಿಗೂ ಅಪ್ಪಳಿಸಲಿದೆ ಚಂಡಮಾರುತ: ದಿಕ್ಕು ಬದಲಿಸಿ ಹೊರಟಿದೆ 'ಗಜ'

ಇದೀಗ ಅಖಿಲ ಭಾರತ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸ್ಥಾನ ಅಲಂಕರಿಸಿರುವ ರಾಹುಲ್ ಗಾಂಧಿ, ಕಾಂಗ್ರೆಸ್ ಪಕ್ಷದ ಮುಂದಿನ ಪ್ರಧಾನಿ ಅಭ್ಯರ್ಥಿಯಾಗಿದ್ದಾರೆ. ರಾಹುಲ್ ಗಾಂಧಿ ಅವರ ಜನ್ಮ ದಿನಾಚರಣೆ ಅಂಗವಾಗಿ ದೇಶದ ಹಲವು ಗಣ್ಯರು ಶುಭಾಶಯ ಕೋರಿದ್ದಾರೆ.