ಕಾರವಾರ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯಕ್ಕೆ 2018-19ನೇ ಸಾಲಿಗಾಗಿ ಪ್ರವೇಶ ಬಯಸುವ ಮೆಟ್ರಿಕ್ ನಂತರದ ಪಿ.ಯು.ಸಿ, ಡಿಗ್ರಿ, ಡಿಪ್ಲೋಮಾ, ಇಂಜಿನಿಯರಿಂಗ್, ಐ.ಟಿ.ಐಇತ್ಯಾದಿ ಕೋರ್ಸುಗಳನ್ನು ಓದುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

RELATED ARTICLES  ದಾಂಡೇಲಿಯಲ್ಲಿ ಅರಣ್ಯ ವೀಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ನಿಗಧಿತ ಅರ್ಜಿ ನಮೂನೆಯನ್ನು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿಗಳ ಕಛೇರಿ , ತೆಲಿರಾಮಜಿ ರಸ್ತೆ, ಇಂಡಿಯನ್ ಓವರಸಿಸ್ ಬ್ಯಾಂಕ್ ಮೇಲೆ , 2ನೇ ಮಹಡಿ, ಕಾರವಾರ ಹಾಗೂ ತಾಲ್ಲೂಕಾ ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳ ಕಛೇರಿ, ಕಾರವಾರ ರವರಿಂದ ಉಚಿತವಾಗಿ ಪಡೆಯಬಹುದು ಭರ್ತಿ ಮಾಡಿದ ಅರ್ಜಿಗಳನ್ನು ಜುಲೈ 20 ರ ಒಳಗಾಗಿ ಸಂಬಂದ ಪಟ್ಟ ತಾಲೂಕಿನ ವಿಸ್ತರಣಾಧಿಕಾರಿಗಳ ಕಛೇರಿಗೆ ಸಲ್ಲಿಸತಕ್ಕದ್ದು ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES  WORK WANTED