ಸೃಜನಶೀಲ ಯುವ ಬರಹಗಾರರಿಗೆ ಉತ್ತೇಜನ ನೀಡುವ ದೃಷ್ಟಿಯಿಂದ ಸ್ಥಾಪಿತವಾದ ಟೊಟೊ ಪುರಸ್ಕಾರವು ಹದಿನೈದು ವರ್ಷಗಳಿಂದ ಯುವ ಪ್ರತಿಭೆಗಳಿಗೆ ಪ್ರೊತ್ಸಾಹ ನೀಡುತ್ತಾ ಬಂದಿದೆ.

ಕಳೆದ ಎಂಟು ವರ್ಷಗಳಿಂದ ಕನ್ನಡಕ್ಕೂ ವಿಸ್ತೃತಗೊಂಡಿದ್ದು, ಒಂಬತ್ತನೆ ವರ್ಷಕ್ಕೆ ಕಾಲಿಡಲಿದೆ. ಈ ಪ್ರಶಸ್ತಿಯನ್ನು ಟೊಟೊ ಫಂಡ್ಸ್ ದಿ ಆರ್ಟ್ಸ್ (Toto Funds the Arts – TFA) ಸಂಸ್ಥೆಯು ಸ್ಥಾಪಿಸಿ ನಿರ್ವಹಿಸುತ್ತಿದೆ.

ಕನ್ನಡದ ಸೃಜನಶೀಲ ಯುವ ಬರಹಗಾರರಿಗೆ ಮೀಸಲಾದ 2019 ನೇ ಸಾಲಿನ ಟೊಟೊ ಪುರಸ್ಕಾರಕ್ಕಾಗಿ ಟೊಟೊ ಫಂಡ್ಸ್ ದಿ ಆರ್ಟ್ಸ್ ಸಂಸ್ಥೆಯು ಪ್ರವೇಶಗಳನ್ನು ಆಹ್ವಾನಿಸುತ್ತಿದೆ.

ಪುರಸ್ಕಾರಕ್ಕಾಗಿ ಬರಹಗಳನ್ನು ಕಳುಹಿಸುವವರು ಭಾರತೀಯ ನಾಗರಿಕರಾಗಿರಬೇಕು (ಓವರ್ಸೀಸ್ ಸಿಟಿಜೆನ್ ಆಫ್ ಇಂಡಿಯಾ ಚೀಟಿ ಉಳ್ಳವರು ಪ್ರವೇಶಕ್ಕೆ ಅರ್ಹರಾಗಿರುವುದಿಲ್ಲ). ಹಾಗೂ 18 ರಿಂದ 29 ವರ್ಷ ವಯಸ್ಸಿನವರಾಗಿರಬೇಕು. ಅಂದರೆ, ನೀವು ಜನವರಿ 1, 1989 ರ ನಂತರ ಹುಟ್ಟಿದವರಾಗಿದ್ದಲ್ಲಿ ಮಾತ್ರ ಈ ಪುರಸ್ಕಾರಕ್ಕೆ ಪ್ರವೇಶಗಳನ್ನು ಕಳಿಸಲು ಅರ್ಹರು. ಕಥೆ, ಕವಿತೆ ಮತ್ತು ನಾಟಕ ಈ ಮೂರರಲ್ಲಿ ಯಾವುದೇ ಪ್ರಕಾರದಲ್ಲಿಯಾದರೂ ಪ್ರವೇಶಗಳನ್ನು ಕಳಿಸಬಹುದು.

ಈ ಮೂರು ಪ್ರಕಾರಗಳಿಂದ ಒಬ್ಬರನ್ನು ಪುರಸ್ಕಾರಕ್ಕಾಗಿ ಆಯ್ಕೆ ಮಾಡಲಾಗುತ್ತದೆ. ಈ ಆಯ್ಕೆಯನ್ನು ಕನ್ನಡದ ಹಿರಿಯ ಬರಹಗಾರರ ಸಮಿತಿಯು ಪ್ರತಿ ವರ್ಷದಂತೆ ಮಾಡಲಿದೆ. ಟೊಟೊ ಪುರಸ್ಕಾರದ ಹದಿನೈದನೆ ವರ್ಷಾಚರಣೆಯ ಸಂದರ್ಭದಲ್ಲಿ ಪುರಸ್ಕೃತರು ಪಡೆಯುವ ನಗದು ಬಹುಮಾನವನ್ನು 50,000 ರೂಪಾಯಿಗಳಿಗೆ ಹೆಚ್ಚಿಸಲಾಗಿದೆ.

ಪ್ರವೇಶಗಳನ್ನು ಕಳುಹಿಸಲು ಕೊನೆಯ ದಿನಾಂಕ: 20 ಆಗಸ್ಟ್, 2018

ಪ್ರವೇಶಗಳನ್ನು ಈ ವಿಳಾಸಕ್ಕೆ ಕಳಿಸಿ:

Toto Funds the Arts (TFA)

H 301, Adarsh Gardens, 8th Block, 47th Cross,

Jayanagar, Bangalore 560 082

Phone: 080 26990549

ನೆನಪಿರಲಿ:

· ನೀವು 1ನೇ ಜನವರಿ 1989 ರ ನಂತರ ಹುಟ್ಟಿದವರಾಗಿದ್ದಲ್ಲಿ ಮಾತ್ರ ಈ

ಪುರಸ್ಕಾರಕ್ಕೆ ಪ್ರವೇಶಗಳನ್ನು ಕಳಿಸಲು ಅರ್ಹರಾಗಿರುತ್ತೀರಿ.

RELATED ARTICLES  ಬಂದ್ ಆಯ್ತು 2000 ರೂ ನೋಟಿನ ಮುದ್ರಣ.

· ಪ್ರವೇಶಗಳನ್ನು ಕಳುಹಿಸಲು ಕೊನೆಯ ದಿನಾಂಕ: 20 ಆಗಸ್ಟ್,/2018. ಈ ಕೊನೆಯ ದಿನಾಂಕದ ನಂತರ ಬಂದ ಪ್ರವೇಶಗಳನ್ನು ಪರಿಗಣಿಸುವುದಿಲ್ಲ.

· ಭಾರತದಲ್ಲಿ ವಾಸಿಸುವ ಭಾರತೀಯ ನಾಗರಿಕರು ಮಾತ್ರ ಈ ಪುರಸ್ಕಾರಕ್ಕೆ ಪ್ರವೇಶಗನ್ನು ಕಳಿಸಬಹುದು. · ಕವಿತೆಗಳನ್ನು ಕಳುಹಿಸುವವರು 6 ರಿಂದ 10 ಕವಿತೆಗಳನ್ನು ಕಳಿಸಬಹುದು. ಕತೆಗಳನ್ನು

ಕಳಿಸುವವರು ಒಂದಕ್ಕಿಂತ ಹೆಚ್ಚು ಕತೆಗಳನ್ನು ಕಳಿಸಬಹುದು, ಆದರೆ ಎಲ್ಲ ಕತೆಗಳೂ

ಸೇರಿ 7500 ಶಬ್ದಗಳನ್ನು ಮೀರಬಾರದು.

· ನೀವು ಎಲ್ಲ ಮೂರು ಪ್ರಕಾರಗಳಲ್ಲಿಯೂ ಪ್ರವೇಶಗಳನ್ನು ಕಳಿಸಬಹುದು. ಆದರೆ ಪ್ರತಿಯೊಂದು ಪ್ರಕಾರಕ್ಕೂ ಪ್ರತ್ಯೇಕವಾದ ಪ್ರವೇಶಗಳನ್ನು ಕಳಿಸಬೇಕು. ಉದಾಹರಣೆಗೆ ನೀವು ಮರೂ ಪ್ರಕಾರಗಳಿಗೆ ಪ್ರವೇಶಗಳನ್ನು ಕಳಿಸಬಯಸಿದರೆ, ನಿಮ್ಮ ಕವಿತೆಗಳನ್ನು ಮೊದಲ

ಪ್ರವೇಶವಾಗಿಯೂ, ಕತೆಗಳನ್ನು ಎರಡನೆಯ ಪ್ರವೇಶವಾಗಿಯೂ, ನಾಟಕವನ್ನು ಮೂರನೆಯ ಪ್ರವೇಶವಾಗಿಯೂ ಕಳಿಸಬೇಕು. ಪ್ರತಿಯೊಂದು ಪ್ರವೇಶದ ಮಿತಿ 7500 ಶಬ್ದಗಳು.

·ಈಗಾಗಲೇ ಪುಸ್ತಕರೂಪದಲ್ಲಿ ಪ್ರಕಟವಾಗಿರುವ ಕೃತಿಗಳನ್ನು ಪುರಸ್ಕಾರಕ್ಕಾಗಿ

ಕಳಿಸುವಂತಿಲ್ಲ. ಪತ್ರಿಕೆಗಳಲ್ಲಿ ಪ್ರಕಟವಾಗಿರುವ ಬಿಡಿ ಕತೆ, ಕವಿತೆ, ನಾಟಕಗಳನ್ನು

ಕಳಿಸಬಹುದು.

·ಪ್ರವೇಶಕ್ಕಾಗಿ ಕಳಿಸುವ ಕತೆ, ಕವಿತೆ, ನಾಟಕಗಳ ಮೇಲೆ ಎಲ್ಲಿಯೂ ನಿಮ್ಮ ಹೆಸರು ಬರೆದಿರಬಾರದು. ಇದನ್ನು ಪ್ರತ್ಯೇಕವಾಗಿ ಅರ್ಜಿಯೆಲ್ಲೇ ಬರೆದು, ಪ್ರವೇಶದ ಜೊತೆ ಲಗತ್ತಿಸಬೇಕು.
·ಅರ್ಜಿಯನ್ನು ನಿಮ್ಮ ಬ್ಯಾಂಕ್ ಖಾತೆಯಲ್ಲಿ ದಾಖಾಲಾದ ಹೆಸರು ಹಾಗು ಸಹಿ ಇಲ್ಲದೆ ಸ್ವೀಕರಿಸುವುದಿಲ್ಲ. ಕಾವ್ಯನಾಮ ಇದ್ದಲ್ಲಿ, ನಿಮ್ಮ ಅಸಲಿ ಹೆಸರನ್ನು ಕೂಡ ಸೂಚಿಸಬೇಕು.

·ನೀವು ಸಲ್ಲಿಸುವ ಪ್ರತಿ ಪ್ರವೇಶದ ಜೊತೆಗೆ ಅರ್ಜಿಯನ್ನು ಖಚಿತವಾಗಿ ಲಗತ್ತಿಸಬೇಕು. ಈ ಅರ್ಜಿಯನ್ನು http://totofundsthearts.blogspot.in/ ಇಲ್ಲಿಂದ ನಕಲಿಳಿಸ ಬಹುದು ಅಥವಾ [email protected] ಗೆ ಬರೆದು ಒಂದು ಅರ್ಜಿಯ ವಿ-ಪ್ರತಿ (ಸಾಫ್ಟ್ ಕಾಪಿ) ಪಡೆಯಬಹುದು. ಈ ಅರ್ಜಿ ಇಲ್ಲದ ಪ್ರವೇಶಗಳನ್ನು ಪರಿಗಣಿಸುವುದಿಲ್ಲ.

· ನಿಮ್ಮ ಪ್ರವೇಶಗಳನ್ನು ಸಾದಾ ಅಂಚೆಯ ಮೂಲಕ ಅಥವಾ ಕುರಿಯರ್ ಮೂಲಕ ಈ ಕೆಳಗೆ ಕೊಟ್ಟಿರುವ ವಿಳಾಸಕ್ಕೆ ಕಳಿಸಿ. ರಿಜಿಸ್ಟರ್ಡ್ ಪೋಸ್ಟ್ ಅಥವಾ ಸ್ಪೀಡ್ ಪೋಸ್ಟ್ ಮೂಲಕ ಕಳಿಸಬೇಡಿ.

RELATED ARTICLES  ಮಾರ್ಚ 24 ರಂದು ಶ್ರೀನಿಧಿ ಸೇವಾವಾಹಿನಿ ಪ್ರತಿಭಾ ಪುರಸ್ಕಾರ ಸನ್ಮಾನ ಕಾರ್ಯಕ್ರಮ.

· ಅಂಚೆ/ಕುರಿಯರ್ ಹೊದಿಕೆ (ಎನ್ವೊಲೊಪ್) ಮೇಲೆ ನಿಮ್ಮ ಕೃತಿಯ ಪ್ರಕಾರವನ್ನು ಸೂಚಿಸಬೇಕು. ಉದಾಹರಣೆಗೆ: ‘ಕನ್ನಡ ಸೃಜನಶೀಲ ಸಾಹಿತ್ಯ – ಕವಿತೆ’, ‘ಕನ್ನಡ ಸೃಜನಶೀಲ ಸಾಹಿತ್ಯ – ನಾಟಕ’ ಅಥವ ‘ಕನ್ನಡ ಸೃಜನಶೀಲ ಸಾಹಿತ್ಯ – ಕತೆ’.

· ಪ್ರವೇಶವನ್ನು ಅಂಚೆ/ಕುರಿಯರ್ ಮೂಲಕ ಕಳಿಸುವ ಜೊತೆಗೆ, ವಿ-ಪ್ರತಿ (ಸಾಫ್ಟ್ ಕಾಪಿ) ಕೂಡ [email protected] ಇದಕ್ಕೆ ಖಚಿತವಾಗಿ ಕಳಿಸಬೇಕು.

· ಹಸ್ತಪ್ರತಿಗಳನ್ನು ಹಾಳೆಯ ಒಂದೇ ಮಗ್ಗಲಿಗೆ ಕಂಪ್ಯೂಟರ್ ಬಳಸಿ ಅಥವ ಟೈಪ್ ಮಾಡಿ ಕಳಿಸಬೇಕು. ಪುಸ್ತಕಗಳು ಅಥವ ವಾರ್ತಪತ್ರಿಕೆಗಳ ಪತ್ರಿಕಾಭಾಗ ಕಳಿಸಿದ್ದಲ್ಲಿ ಅರ್ಜಿಯನ್ನು ಪರಿಗಣಿಸುವುದಿಲ್ಲ.

· ಪುರಸ್ಕಾರದ ಕುರಿತು ಯಾವುದೇ ಫೋನ್ ಕರೆಗಳನ್ನು ಸ್ವೀಕರಿಸಲಾಗುವುದಿಲ್ಲ. ನಿಮಗೆ ಯಾವುದೇ ಬಗೆಯ ಸ್ಪಷ್ಟೀಕರಣ ಬೇಕಾದಲ್ಲಿ ಈ ಕೆಳಗಿನ ವಿಳಾಸಕ್ಕೆ ವಿ-ಅಂಚೆ ಕಳಿಸಿ: [email protected] ಅಥವ 98442 64157 ಗೆ ಕರೆ ಮಾಡಬಹುದು.

ಷರತ್ತುಗಳು:

ನೀವು ಸಲ್ಲಿಸಿದ ಬರಹಗಳನ್ನು ಹಿಂತಿರುಗಿಸಲಾಗುವುದಿಲ್ಲ. ಅಗತ್ಯವಾದಲ್ಲಿ ನೀವು ಸಲ್ಲಿಸಿದ ಬರಹಳ ಆಯ್ದ ಭಾಗಗಳನ್ನು ಅಂತರ್ಜಾಲ ತಾಣದಲ್ಲಿ ಅಥವ ಸಂಸ್ಥೆಯ ಬ್ಲಾಗ್’ನಲ್ಲಿ/ಪುರಸ್ಕಾರದ ಪ್ರಚಾಕ್ಕೆ ಬಳಸಿಕೊಳ್ಳುವ ಹಕ್ಕು ಟಿ.ಎಫ್.ಎ.ಗೆ ಇದೆ. ಉಳಿದಂತೆ ಕೃತಿಯ ಪೂರ್ತಿ ಹಕ್ಕುಸ್ವಾಮ್ಯವು

ಬರಹಗಾರರದೇ ಆಗಿರುತ್ತದೆ. ಈ ಬಗ್ಗೆ ಯಾವುದೇ ಪತ್ರ ವ್ಯವಹಾರ ಮಾಡಲಾಗುವುದಿಲ್ಲ. ಪುರಸ್ಕಾರದ ಕುರಿತು ಟಿ.ಎಫ್.ಎ ಆಯ್ಕೆ ಸಮಿತಿಯ ನಿರ್ಧಾರವೇ ಅಂತಿಮವಾದುದು ಮತ್ತು ಇದನ್ನು ಯಾವ ಬಗೆಯಲ್ಲೂ ಪ್ರಶ್ನಿಸಲಾಗದು.

ಈ ಪುರಸ್ಕಾರಕ್ಕೆ ಭೂಮಿಜಾ ಟ್ರಸ್ಟ್ ನೆರವು ನೀಡುತ್ತಿದೆ.

ಟಿ.ಎಫ್.ಎ. ಸಂಸ್ಥೆಯು ಆಂಗಿರಸ ‘ಟೊಟೊ’ ವೆಲ್ಲಾನಿಯ ಸ್ಮರಣಾರ್ಥ 2004 ರಲ್ಲಿ ಸ್ಥಾಪಿತವಾಯಿತು. ಕಲೆಗಳ ಬಗ್ಗೆ ಗಾಢವಾದ ಆಸಕ್ತಿಯನ್ನಿರಿಸಿಕೊಂಡಿದ್ದ ಟೊಟೊರವರ ಅಕಾಲಿಕ ಮರಣವು ಅವರ ಕುಟುಂಬ ಮತ್ತು ಸ್ನೇಹಿತರನ್ನು ಈ ಸಂಸ್ಥೆಯ ಸ್ಥಾಪನೆಗೆ ಪ್ರೇರೇಪಿಸಿತು. ಈ ಮೂಲಕ ಯುವ ಪ್ರತಿಭೆಗಳು ತಮ್ಮ

ಕಲಾತ್ಮಕ ಅಭಿವ್ಯಕ್ತಿಯನ್ನು ಕಂಡುಕೊಳ್ಳುವಲ್ಲಿ ಉತ್ತೇಜನ ಸಿಗಲೆಂಬುದು

ಇದರ ಆಶಯವಾಗಿದೆ.