ಬೆಂಗಳೂರು, – ಹಜ್ ಭವನಕ್ಕೆ ಟಿಪ್ಪು ಹೆಸರಿಡುವ ಬಗ್ಗೆ ಸರ್ಕಾರ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಇಂದಿಲ್ಲಿ ಸ್ಪಷ್ಟಪಡಿಸಿದರು. ಸದಾಶಿವನಗರದ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮುದಾಯದವರು ಟಿಪ್ಪು ಹೆಸರಿಡುವಂತೆ ಮನವಿ ಮಾಡಿದ್ದಾರೆ. ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಹಿಂದೆ ಟಿಪ್ಪು ಜಯಂತಿಯನ್ನು ಸರ್ಕಾರ ಆಚರಣೆ ಮಾಡಿದೆ. ಈ ಸಮಯದಲ್ಲಿ ಬಿಜೆಪಿಯವರು ಸಾಕಷ್ಟು ಗೊಂದಲ ಸೃಷ್ಟಿ ಮಾಡುವ ಪ್ರಯತ್ನ ಮಾಡಿದ್ದರು. ಈಗಲೂ ಗೊಂದಲ ಸೃಷ್ಟಿ ಮಾಡುವ ಪ್ರಯತ್ನ ಅವರು ಮಾಡುತ್ತಿದ್ದಾರೆ ಎಂದು ಹೇಳಿದರು.

RELATED ARTICLES  ಅರಬ್ಬೀ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ದಕ್ಷಿಣ ಕರ್ನಾಟಕದಲ್ಲಿ 2 ದಿನ ಮಳೆಯಾಗುವ ಸಾಧ್ಯತೆ.

ಸರ್ಕಾರದ ನಿವಾಸ ಬೇಕು ಎಂದು ಬೇಡಿಕೆ ಇಟ್ಟಿದ್ದೇನೆ. ಇದೇ ಬೇಕು ಎಂದು ಹೇಳಿಲ್ಲ. ಸದ್ಯ ನಾನು ಇರುವ ನಿವೇಶನದಲ್ಲಿ ಸಾರ್ವಜನಿಕರ ಭೇಟಿಗೆ ಕಷ್ಟವಾಗುತ್ತಿದೆ. ಸಿದ್ದರಾಮಯ್ಯನವರ ನಿವಾಸ ಕಾವೇರಿನೇ ಬೇಕು ಎಂಬ ಬೇಡಿಕೆ ನಾನಿಟ್ಟಿಲ್ಲ ಎಂದು ಹೇಳಿದರು. ಕೆಲ ಅತೃಪ್ತ ಶಾಸಕರು ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಸಚಿವ ಸಂಪುಟ ವಿಸ್ತರಣೆ, ನಿಗಮ ಮಂಡಳಿಗಳ ಬಗ್ಗೆ ಚರ್ಚೆ ನಡೆಸಿರುವ ವಿಷಯ ನನಗೆ ಗೊತ್ತಿಲ್ಲ ಎಂದು ತಿಳಿಸಿದರು.

RELATED ARTICLES  SSLC ಪರೀಕ್ಷೆಯ ಫಲಿತಾಂಶ (SSLC Result) ಪ್ರಕಟ.

ಸಿದ್ದರಾಮಯ್ಯನವರು ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷರಾಗಿದ್ದಾರೆ. ದೆಹಲಿ ಮಟ್ಟದಲ್ಲಿ ಸಮನ್ವಯ ಸಮಿತಿ ಅಧ್ಯಕ್ಷರಿಗೆ ಸಂಪುಟದರ್ಜೆಯ ಸ್ಥಾನಮಾನ ನೀಡಲಾಗಿದೆ. ಅದೇ ರೀತಿ ಇಲ್ಲಿಯೂ ಸಿದ್ದರಾಮಯ್ಯನವರಿಗೆ ಸಂಪುಟ ದರ್ಜೆಯ ಸ್ಥಾನ ಮಾನ ನೀಡುವ ಬಗ್ಗೆ ಚಿಂತನೆ ಇದೆ ಎಂದು ಪರಮೇಶ್ವರ್ ತಿಳಿಸಿದರು.