ಕಾರವಾರ: ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ ಯುವಜನರನ್ನು ಸಾಹಿತ್ಯಾಭಿರುಚಿಗೆ ಆಕರ್ಷಿಸಲು ಪದವಿ ಕಾಲೇಜು ಹಾಗೂ ಸ್ನಾತಕೋತ್ತರ ಕೇಂದ್ರಗಳಲ್ಲಿ ಜಾಣ ಜಾಣೆಯರ ಬಳಗವನ್ನು ರಚಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಕನಿಷ್ಠ 5 ರಿಂದ 15 ವಿದ್ಯಾರ್ಥಿಗಳನ್ನೋಳಗೊಂಡಂತೆ ಕಾರ್ಯಕಾರಿ ಸಮಿತಿಯೊಂದನ್ನು ರಚಿಸಿಕೊಂಡು ಆಯಾ ಕಾಲೇಜುಗಳ ಪ್ರಾಂಶುಪಾಲರು ಹಾಗೂ ಕನ್ನಡ ವಿಭಾಗಗಳ ಮುಖ್ಯಸ್ಥರ ಅನುಮೋದನೆಯೊಂದಿಗೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಅರ್ಜಿಯನ್ನು ಜೂನ್ 30 ರೊಳಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು- 560002 ವಿಳಾಸಕ್ಕೆ ಕಳುಹಿಸಿಕೊಡುವುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂ : 080-22484516/ 22017704 ಹಾಗೂ ಪ್ರಾಧಿಕಾರದ ವೆಬ್ ಸೈಟ್ www.kannadapustakapradhikara.com ಸಂಪರ್ಕಿಸಲು ಕೋರಿದೆ.
ಕಾರವಾರ: ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ ಯುವಜನರನ್ನು ಸಾಹಿತ್ಯಾಭಿರುಚಿಗೆ ಆಕರ್ಷಿಸಲು ಪದವಿ ಕಾಲೇಜು ಹಾಗೂ ಸ್ನಾತಕೋತ್ತರ ಕೇಂದ್ರಗಳಲ್ಲಿ ಜಾಣ ಜಾಣೆಯರ ಬಳಗವನ್ನು ರಚಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.