ಕಾರವಾರ: ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2017ನೇ ವರ್ಷ ಅವಧಿಯಲ್ಲಿ ಕನ್ನಡದಲ್ಲಿ ಪ್ರಕಟವಾದ ಕೃತಿಗಳಿಗೆ ಅವುಗಳ ಮುದ್ರಣ ಮುಖಪುಟ,ವಿನ್ಯಾಸ ಗುಣಮಟ್ಟವನ್ನು ಪರಿಗಣಿಸಿ ಕನ್ನಡ ಪುಸ್ತಕ ಸೊಗಸು ಬಹುಮಾನ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

RELATED ARTICLES  ಡಿ. 15 ರ ವರೆಗೂ ಮುಂದುವರೆಯಲಿದೆ ಮಳೆ.

ಆಸಕ್ತ ಕಲಾವಿದರು, ಲೇಖಕರು, ಪ್ರಕಾಶಕರು ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿದಾರರು ಪುಸ್ತಕದ ಹೆಸರು, ಲೇಖಕರ ಹೆಸರು ಪ್ರಕಟವಾದ ವರ್ಷ ಈ ಎಲ್ಲಾ ವಿವರಗಳೊಂದಿಗೆ ಪುಸ್ತಕದ ಎರಡು ಪ್ರತಿಗಳನ್ನು ಜೂನ್ 30 ರೊಳಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು- 560002 ವಿಳಾಸಕ್ಕೆ ಕಳುಹಿಸಿಕೊಡುವುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂ : 080-22484516/ 22017704 ಹಾಗೂ ಪ್ರಾಧಿಕಾರದ ವೆಬ್ ಸೈಟ್ www.kannadapustakapradhikara.com ಸಂಪರ್ಕಿಸಲು ಕೋರಿದೆ.

RELATED ARTICLES  ಐ.ಡಿ.ಬಿ.ಐ ಬ್ಯಾಂಕ್ ದಲ್ಲಿ 650 ಅಸಿಸ್ಟೆಂಟ್ ಮ್ಯಾನೇಜರ್ ಗ್ರೇಡ್-"A" ಹುದ್ದೆಗಳ ಬೃಹತ್ ನೇಮಕಾತಿ-2021