ಹೊನ್ನಾವರ: ತಾಲೂಕಿನ ಮಾಗೋಡು, ಹಾಮಕ್ಕಿ, ಚಿತ್ತಾರ ಗ್ರಾಮಗಳ ವ್ಯಾಪ್ತಿಯಲ್ಲಿ ಡೆಂಗಿ ರೋಗವು ಕಾಣಿಸಿಕೊಳ್ಳುತ್ತಿದ್ದು ಈವರೆಗೆ ಹೊನ್ನಾವರ ತಾಲೂಕಿನಲ್ಲಿ 17 ಖಚಿತ ಡೆಂಗಿ ಪ್ರಕರಣಗಳು ಪತ್ತೆಯಾಗಿವೆ ಎಂದು ಜಿಲ್ಲಾ ರೋಗವಾಹಕ ಆಶ್ರಿತ ನಿಯಂತ್ರಾಣಾಧಿಕಾರಿ ಕ್ಯಾಪ್ಟನ್ ಡಾ.ರಮೇಶ್‍ರಾವ್ ತಿಳಿಸಿದ್ದಾರೆ.

ಈಗಾಗಲೇ ಆರೋಗ್ಯ ಇಲಾಖೆಯ ಎಲ್ಲ ಕ್ಷೇತ್ರ ಸಿಬ್ಬಂದಿಗಳು ಮನೆ ಮನೆ ಭೇಟಿ ಮಾಡಿ ಜ್ವರ ಸಮೀಕ್ಷೆ, ಈಡಿಸ್ ಲಾರ್ವ ಸಮೀಕ್ಷೆ ಹಾಗೂ ಅದನ್ನು ತಡೆಗಟ್ಟಲು ಸಾರ್ವಜನಿಕರು ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ತಿಳಿಸಿರುತ್ತಾರೆ ಎಂದು ಅವರು ತಿಳಿಸಿದರು.

RELATED ARTICLES  ಮೋಹನ ಭಾಸ್ಕರ ಹೆಗಡೆ ಬರೆದ ಆಯುರ್ವೇದ ಯುಗಬಂಧು ಡಾ. ಗಿರಿಧರ ಕಜೆ ಕೃತಿ ಬಿಡುಗಡೆ

ಪ್ರಕರಣಗಳು ಕಂಡು ಬರುತ್ತಿರುವ ಪ್ರದೇಶಗಳಲ್ಲಿ ಈಗಾಗಲೇ ಒಳಾಂಗಣ ಧೂಮೀಕರಣ ಮಾಡಲಾಗುತ್ತಿದೆ. ಸಾರ್ವಜನಿಕರು ಯಾವುದೇ ಜ್ವರ ಕಂಡು ಬಂದಲ್ಲಿ ಕೂಡಲೇ ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರ ಅಥವಾ ತಾಲೂಕು ಆಸ್ಪತ್ರೆಗಳಿಗೆ ಭೇಟಿ ನೀಡಿ ಚಿಕಿತ್ಸೆ ಪಡೆಯಬೇಕು. ತಾಲೂಕು ಆಸ್ಪತ್ರೆಗಳಲ್ಲಿ ಈಗಾಗಲೇ ಈಗಾಗಲೇ ಡೆಂಗಿ ರೋಗ ಪ್ರಕರಣ ಚಿಕಿತ್ಸೆಗೆ ಪ್ರತ್ಯೇಕ ವಾರ್ಡ್‍ಗಳನ್ನು ಮಾಡಲಾಗಿದೆ ಹಾಗೂ ಔಷಧಗಳನ್ನು ಸರಬರಾಜು ಮಾಡಲಾಗಿದೆ ಎಂದು ಅವರು ಹೇಳಿದರು.

RELATED ARTICLES  ಅಮೋಘ ಸಾಧನೆಯತ್ತ ಚಿತ್ರಗಿಯ ಮಹಾತ್ಮಾ ಗಾಂಧಿ ಪ್ರೌಢಶಾಲೆ: ವಿವಿಧ ಸ್ಪರ್ಧೆಗಳಲ್ಲಿ ಸಾಧನೆ.

ಸಾರ್ವಜನಿಕರು ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ಎಚ್ಚರ ವಹಿಸಿ ಈಡಿಸ್ ಲಾರ್ವ ಉತ್ಪತ್ತಿಯಾಗದಂತೆ ಕ್ರಮ ವಹಿಸಬೇಕು. ಅಲ್ಲದೆ, ಮನೆಯ ಸುತ್ತಮುತ್ತ ಅಡ್ಡಾಡುವಾಗ ಮೈತುಂಬಾ ಬಟ್ಟೆ ಹಾಕುವುದು, ಮಲಗುವಾಗ ಸೊಳ್ಳೆ ಪರದೆಗಳನ್ನು ಉಪಯೋಗಿಸುವುದು ಮುಂತಾದ ಕ್ರಮಗಳು ರೋಗ ನಿಯಂತ್ರಣಕ್ಕೆ ಸಹಕಾರಿಯಾಗಿದ್ದು ಸಾರ್ವಜನಿಕರು ಸಹಕರಿಸುವಂತೆ ಅವರು ತಿಳಿಸಿದರು.