ಭಟ್ಕಳ: ರೈಲಿಗೆ ತಲೆಕೊಟ್ಟು ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಭಟ್ಕಳ ತಾಲೂಕಿನ ಶಿರಾಲಿ ಬಳಿಯ ಚಿತ್ರಾಪುರದಲ್ಲಿ ರಾತ್ರಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಶೋಭಾ ಮಾದೇವ ನಾಯ್ಕ ಎಂದು ಗುರುತಿಸಲಾಗಿದೆ.
ದೆಹಲಿಯಿಂದ ಕೇರಳಕ್ಕೆ ಹೋಗುವ ಮಂಗಳಾ ಎಕ್ಸ್ಪ್ರೆಸ್ ರೈಲಿಗೆ ಸಿಲುಕಿ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಶೋಭಾ ಶಿರಾಲಿಯ ಸೆಂಟ್ ಥೋಮಸ್ ಶಾಲೆಯಲ್ಲಿ ಕಂಪ್ಯೂಟರ್ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು.
ನಿನ್ನೆ ರಾತ್ರಿ 8 ಗಂಟೆಯಿಂದ ಮೃತ ಯುವತಿ ಮನೆಯಿಂದ ನಾಪತ್ತೆಯಾಗಿದ್ದಳು ಎಂದು ಪೋಷಕರು ತಿಳಿಸಿದ್ದಾರೆ. ಸ್ಥಳಕ್ಕೆ ಭಟ್ಕಳ ಪೊಲೀಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ತನಿಖೆಯ ನಂತರದಲ್ಲಿ ಸಾವಿಗೆ ಕಾರಣ ತಿಳಿಯಬೇಕಿದೆ.