.

ಕಾರವಾರ: ಜಿಲ್ಲಾ ಪತ್ರಿಕಾ ಭವನ ನಿರ್ವಹಣಾ ಸಮಿತಿ, ಜಿಲ್ಲಾ ಕೇಂದ್ರ ಕಾರ್ಯನಿರತ ಪತ್ರಕರ್ತರ ಸಂಘ, ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಶ್ರಯದಲ್ಲಿ ಜುಲೈ 1ರಂದು ನಗರದ ಜಿಲ್ಲಾ ಪತ್ರಿಕಾ ಭವನದ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಕಾರ್ಯಕ್ರಮದಲ್ಲಿ ಕನ್ನಡ ಪ್ರಭ ದಿನಪತ್ರಿಕೆಯ ಪ್ರಧಾನ ಸಂಪಾದಕ ರವಿ ಹೆಗಡೆ, ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಹಿಮಂತರಾಜು ಜಿ. ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಶಾಸಕಿ ರೂಪಾಲಿ ನಾಯ್ಕ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ಜಿಲ್ಲಾ ಪತ್ರಿಕಾ ಭವನ ನಿರ್ವಹಣಾ ಸಮಿತಿ ಅಧ್ಯಕ್ಷರಾದ ಟಿ.ಬಿ.ಹರಿಕಾಂತ ವಹಿಸಲಿದ್ದು, ಉಪಾಧ್ಯಕ್ಷ ಕಡತೋಕಾ ಮಂಜು ಉಪಸ್ಥಿತರಿರಲಿದ್ದಾರೆ.

RELATED ARTICLES  ಇಂದು ವೆಂಕ್ಟಾಪುರದಲ್ಲಿ ನಿನಾದ ದಸರಾ ಕವಿಗೋಷ್ಠಿ

ಈ ಸಂದರ್ಭದಲ್ಲಿ ಟ್ಯಾಗೋರ್ ಪತ್ರಿಕಾ ಪ್ರಶಸ್ತಿ ಪುರಸ್ಕೃತರಾದ ಟಿವಿ 5 ಕನ್ನಡದ ಸಹ ಸಂಪಾದಕ ಶ್ರೀನಾಥ ಜೋಶಿ, ಜೀವಮಾನದ ಸಾಧನೆಗೆ ಕನ್ನಡ ಪ್ರಭದ ವಿಶೇಷ ವರದಿಗಾರ ವಸಂತಕುಮಾರ್ ಕತಗಾಲ ಹಾಗೂ ಕೆಪಿಎನ್ ಛಾಯಾಗ್ರಾಹಕ ಪಾಂಡುರಂಗ ಹರಿಕಂತ್ರ ಮತ್ತು ಹರ್ಮನ್ ಮೊಗ್ಲಿಂಗ್ ಪ್ರಶಸ್ತಿಗೆ ಬಿಟಿವಿ ನ್ಯೂಸ್ ನ ಪ್ರಧಾನ ನಿರೂಪಕ ಶೇಷಕೃಷ್ಣ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಈ ವೇಳೆ ಜಿಲ್ಲಾ ಪತ್ರಿಕಾ ಭವನಕ್ಕೆ ಕೊಡುಗೆ ನೀಡಿದ ದಾನಿಗಳಿಗೂ ಗೌರವಿಸಲಾಗುತ್ತದೆ.

RELATED ARTICLES  ಯಲ್ಲಾಪುರದ ರಂಗ ಸಹ್ಯಾದ್ರಿ ಇವರ ಸಹಯೋಗದಲ್ಲಿ ಯಶಸ್ವಿಯಾಗಿ ನಡೆದ 'ಕಲಾಹಬ್ಬ 2018'

ಈ ಪತ್ರಿಕಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಜಿಲ್ಲಾ ಕೇಂದ್ರ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಶೇಷಗಿರಿ ಮುಂಡಳ್ಳಿ, ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ನ ಕಾರ್ಯದರ್ಶಿ ಗಿರೀಶ್ ಬಾಂದೇಕರ್, ಜಿಲ್ಲಾ ಪತ್ರಿಕಾ ಭವನದ ನಿರ್ವಹಣಾ ಸಮಿತಿಯ ಕಾರ್ಯದರ್ಶಿ ದೀಪಕಕುಮಾರ್ ಶೇಣ್ವಿ ಹಾಗೂ ಪದಾಧಿಕಾರಿಗಳು, ಸರ್ವ ಸದಸ್ಯರು ವಿನಂತಿಸಿದ್ದಾರೆ.